![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 11, 2024, 9:27 AM IST
ವಾಷಿಂಗ್ಟನ್: 96ನೇ ಆಸ್ಕರ್ ಪ್ರಶಸ್ತಿ ಸಮಾರಂಭ ಯುಎಸ್‌ಎಯ ಕ್ಯಾಲಿಫೋರ್ನಿಯಾದ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ.
ಹಾಲಿವುಡ್ ಸಿನಿರಂಗದಲ್ಲಿ ಸದ್ದು ಮಾಡಿದ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಮುಖವಾಗಿ ಕ್ರಿಸ್ಟೋಫರ್ ನೋಲನ್ ಅವರ ʼಓಪನ್ ಹೈಮರ್ʼ ವಿವಿಧ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.
ಆಸ್ಕರ್ ಕಾರ್ಯಕ್ರಮ ಪ್ರತಿವರ್ಷ ಒಂದಲ್ಲ ಒಂದು ಕಾರಣಕ್ಕೆ ಚರ್ಚಾ ವಿಚಾರವಾಗುತ್ತದೆ. ಕೆಲ ವರ್ಷಗಳ ಹಿಂದೆ ನಿರೂಪಕನ ಮೇಲೆ ನಟನೊಬ್ಬ ಕಪಾಳಮೋಕ್ಷ ಮಾಡಿದ್ದರು. ಈ ವರ್ಷ ಆಸ್ಕರ್ ವೇದಿಕೆಗೆ ನಟನೊಬ್ಬ ಬೆತ್ತಲಾಗಿ ಬಂದಿರುವುದು ವೈರಲ್ ಆಗಿದೆ.
WWE ಸೂಪರ್ ಸ್ಟಾರ್, ಅಮೆರಿಕಾದ ನಟ ಜಾನ್ ಸೆನಾ ಆಸ್ಕರ್ ವೇದಿಕೆಗೆ ಬೆತ್ತಲಾಗಿ ಬಂದು ಅಚ್ಚರಿ ಮೂಡಿಸಿದ್ದಾರೆ.
ಜಾನ್ ಸೆನಾ ಅವರು ವಸ್ತ್ರ ವಿನ್ಯಾಸ ಪ್ರಶಸ್ತಿ ನೀಡಲು ವೇದಿಕೆ ಬಂದಿದ್ದರು. ಈ ವೇಳೆ ಅವರು ಖಾಸಗಿ ಅಂಗಕ್ಕೆ ಸ್ಟೋರಿ ಬೋರ್ಡ್ ನ್ನು ಅಡ್ಡ ಹಿಡಿದು ಬೆತ್ತಲಾಗಿ ವೇದಿಕೆಗೆ ಬಂದಿದ್ದಾರೆ. ಜಾನ್ ಸೆನಾ ಈ ರೀತಿಯಾಗಿ ಬರುವುದು ಕಾರ್ಯಕ್ರಮದ ಒಂದು ಭಾಗವಾಗಿತ್ತು. ಇದಕ್ಕಾಗಿ ಪೂರ್ವ ತಯಾರಿಯನ್ನು ನಡೆಸಲಾಗಿತ್ತು.
ಬೆತ್ತಲಾಗಿ ವೇದಿಕೆಗೆ ಬಂದ ಜಾನ್ ಸೆನಾ ಅವರ ಅವತಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ನಾನಾ ಚರ್ಚೆಗಳು ಆರಂಭವಾಗಿದೆ. ಇದು ಮನರಂಜನೆಗೆ ಮಾತ್ರ ಎಂದು ಕೆಲವರು ಹೇಳುತ್ತಿದ್ದು, ಇನ್ನು ಕೆಲವರು ಇಂತಹ ವೇದಿಕೆಯಲ್ಲಿ ಈ ರೀತಿಯಾಗಿ ಕಾಣಿಸಿಕೊಂಡಿರುವುದು ಅಸಹ್ಯವೆಂದು ಕಮೆಂಟ್ ಮಾಡಿದ್ದಾರೆ.
john cena introducing ‘best costume design’ NAKED at the oscars 😭 pic.twitter.com/DVCSFDlnto
— 2000s (@PopCulture2000s) March 11, 2024
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.