VIRAL VIDEO: ರೈಲಿನಲ್ಲಿ ತನ್ನ ಭುಜದ ಮೇಲೆ ಮಲಗಿದ್ದ ಪ್ರಯಾಣಿಕನಿಗೆ ಪಂಚ್ ನೀಡಿದ ವ್ಯಕ್ತಿ
Team Udayavani, Aug 27, 2023, 4:09 PM IST
ನ್ಯೂಯಾರ್ಕ್: ನಗರದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತನ್ನ ಭುಜದ ಮೇಲೆ ಒರಗಿದ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯನ್ನು ಹೊಡೆದುರುಳಿಸಿದ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯು ರೈಲಿನಲ್ಲಿ ಘರ್ಷಣೆಯನ್ನು ಉಂಟುಮಾಡಿತು ಎಂದು ನ್ಯೂಯಾರ್ಕ್ ಪೋಸ್ಟ್ ನಲ್ಲಿ ವರದಿಯಾಗಿದೆ.
ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಆರೋಪಿ ವ್ಯಕ್ತಿಯು ತನ್ನ ಎದುರಿನಲ್ಲಿ ಕುಳಿತಿರುವ ವ್ಯಕ್ತಿಗೆ ಬಯ್ಯುತ್ತಿರುವುದು ಕಂಡುಬಂದಿದೆ. ಈ ಸಮಯದಲ್ಲಿ ಬಳಿಯಿದ್ದ ಪ್ರಯಾಣಿಕನು ಏನೋ ಪಿಸುಗುಟ್ಟಿದಾಗ, ಉದ್ರೇಕನಾದ ಆತ ಮೊಣಕೈಯಿಂದ ಬಳಿಯಿದ್ದ ಸಹ ಪ್ರಯಾಣಿಕನ ಮುಖಕ್ಕೆ ಅನೇಕ ಬಾರಿ ಹೊಡೆಯುತ್ತಾನೆ.. ಕೆಲವೇ ಕ್ಷಣಗಳಲ್ಲಿ, ಸಂತ್ರಸ್ಥನ ಸ್ನೇಹಿತನಂತೆ ತೋರುವ ಮತ್ತೋರ್ವ ಪ್ರಯಾಣಿಕನು ಜಿಗಿದು ಆ ವ್ಯಕ್ತಿಗೆ ಗುದ್ದುತ್ತಾನೆ. ಇದು ಹಲವಾರು ನಿಮಿಷಗಳವರೆಗೆ ಮುಂದುವರಿಯುತ್ತದೆ.
ಇದನ್ನೂ ಓದಿ:Dandeli: ಮಾದಕ ವಸ್ತು ಸೇವನೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕರು: ಎಚ್ಚರಿಕೆ ನೀಡಿದ ಪೊಲೀಸರು
ಅಧಿಕಾರಿಗಳ ಪ್ರಕಾರ, ಫಾರೆಸ್ಟ್ ಹಿಲ್ಸ್ 71 ನೇ ಅವೆನ್ಯೂ ಸ್ಟಾಪ್ ಗೆ ಸಾಗುತ್ತಿದ್ದ ಉತ್ತರದ ಎಫ್ ರೈಲಿನಲ್ಲಿ ಸುಮಾರು 5:30 ಗಂಟೆಗೆ ಈ ಘಟನೆ ಸಂಭವಿಸಿದೆ.
New York man elbows another passenger on the subway #subwaycreatures #nyc #frailego pic.twitter.com/N6KX6ltBIz
— Rama (@EyesWitness00) August 24, 2023
ಪೆಟ್ಟು ತಿಂದಾತ ಯಾವುದೇ ವೈದ್ಯಕೀಯ ಸಹಾಯವನ್ನು ನಿರಾಕರಿಸಿದರು ಮತ್ತು ಅವನ ಸ್ನೇಹಿತ ಯಾವುದೇ ಗಾಯಗಳನ್ನು ವರದಿ ಮಾಡಲಿಲ್ಲ. ದಾಳಿಕೋರನ ವಿರುದ್ಧ ಹಲ್ಲೆ ದೂರು ದಾಖಲಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.