ಒಪ್ಪಂದದ ವೇಳೆ ನಾನು ಅಧಿಕಾರದಲ್ಲಿರಲಿಲ್ಲ
Team Udayavani, Sep 27, 2018, 6:00 AM IST
ವಿಶ್ವಸಂಸ್ಥೆ/ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರ ಎರಡು ಸರ್ಕಾರಗಳ ನಡುವಿನ ಒಪ್ಪಂದ. ಆ ಒಪ್ಪಂದ ಏರ್ಪಟ್ಟ ಸಂದರ್ಭದಲ್ಲಿ ತಾವು ಅಧಿಕಾರದಲ್ಲಿ ಇರಲಿಲ್ಲ ಎಂದು ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರನ್ ವಿಶ್ವಸಂಸ್ಥೆಯಲ್ಲಿ ಹೇಳಿದ್ದಾರೆ.
ಡೀಲ್ ಬಗ್ಗೆ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯುತ್ತಿರುವಾಗಲೇ ಮ್ಯಾಕ್ರನ್ ಮೊದಲ ಬಾರಿಗೆ ಸ್ಪಷ್ಟನೆ ನೀಡಿದ್ದಾರೆ. “ಕೆಲ ದಿನಗಳ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ ಏನು ಹೇಳಿದ್ದಾರೋ, ನಾನೂ ಅದನ್ನೇ ಪ್ರಸ್ತಾಪಿಸಲು ಬಯಸುತ್ತೇನೆ. ಇದಕ್ಕಿಂತ ಹೆಚ್ಚಿನದ್ದು ಹೇಳಲು ಏನೂ ಇಲ್ಲ ಮತ್ತು ಆ ಸಂದರ್ಭದಲ್ಲಿ ನಾನು ಅಧಿಕಾರದಲ್ಲಿ ಇರಲಿಲ್ಲ. ನಮ್ಮಲ್ಲಿ ಸ್ಪಷ್ಟವಾದ ನಿಯಮಗಳು ಇವೆ’ ಎಂದು ಮ್ಯಾಕ್ರನ್ ನುಡಿದಿದ್ದಾರೆ. ಈ ಒಪ್ಪಂದವು ಅತ್ಯಂತ ವ್ಯೂಹಾತ್ಮಕವಾದ್ದರಿಂದ ನನಗೆ ಮಹತ್ವದ್ದಾಗಿದೆ. ಇದು ಕೈಗಾರಿಗಾ ವಿಚಾರಕ್ಕೆ ಸಂಬಂಧಿಸಿದ್ದು ಮಾತ್ರವಲ್ಲ ಎಂದೂ ಹೇಳಿದ್ದಾರೆ.
ನಿಲ್ಲದ ಟೀಕೆ: ಇದೇ ವೇಳೆ, ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ಮುಂದು ವರಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 30 ಸಾವಿರ ಕೋಟಿ ರೂ.ಗಳನ್ನು ಕದ್ದು, ವಿಮಾನ ತಯಾರಿಕೆಯಲ್ಲಿ ಯಾವುದೇ ಕೌಶಲ್ಯ ಇಲ್ಲದಿರುವ (ಅನಿಲ್ ಅಂಬಾನಿಯವರ ಸಂಸ್ಥೆ) ವ್ಯಕ್ತಿಗೆ ನೀಡಲಾಗಿದೆ. ಕೇಂದ್ರ ಸರ್ಕಾರದ್ದು ಸ್ಕಿಲ್ ಇಂಡಿಯಾ ಅಲ್ಲ, ಯೆಸ್-ಕಿಲ್ ಇಂಡಿಯಾ(“ಹೌದು- ಭಾರತವನ್ನು ಕೊಲ್ಲುವ’ )ಕಾರ್ಯಕ್ರಮವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಂದೆಡೆ, ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಕೂಡ ಪ್ರತಿಕ್ರಿಯಿಸಿದ್ದು, “ಕಳೆದ 4 ವರ್ಷ ಗಳಿಂ ದಲೂ ಬಿಜೆಪಿ ನನ್ನ ವಿರುದ್ಧ ಆಧಾರರಹಿತ ರಾಜಕೀಯ ದಾಳಿ ನಡೆಸುತ್ತಾ ಬಂದಿದೆ’ ಎಂದು ಟ್ವೀಟಿಸಿದ್ದಾರೆ.
ರಮ್ಯಾ ವಿರುದ್ಧ ದೇಶದ್ರೋಹದ ಕೇಸು
ರಫೇಲ್ ಡೀಲ್‌ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟ್ವಿಟರ್‌ನಲ್ಲಿ “ಚೋರ್’ (ಕಳ್ಳ) ಎಂದು ಟೀಕಿಸಿದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಲಾಗಿದೆ. ನ್ಯಾಯವಾದಿ ಸಯ್ಯದ್ ರಿಜ್ವಾನ್ ಎಂಬುವರು ಸಲ್ಲಿಸಿದ ದೂರಿನ ಆಧಾರದಲ್ಲಿ ಉತ್ತರ ಪ್ರದೇಶದ ಗೋಮತಿನಗರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಜತೆಗೆ ವಿಭೋರ್ ಆನಂದ್ ಎಂಬುವರು ಕೂಡ ರಮ್ಯಾ ವಿರುದ್ಧ 10 ಸಾವಿರ ಕೋಟಿ ರೂ. ಮೌಲ್ಯದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.