ಭಾರತ ಅಮೆರಿಕಾ ನಡುವೆ ಶೀಘ್ರವೇ ಹೊಸ ವಾಣಿಜ್ಯ ಒಪ್ಪಂದ : ಟ್ರಂಪ್ ಭರವಸೆ

Team Udayavani, Sep 24, 2019, 11:53 PM IST

Modi-Trump-726

ನ್ಯೂಯಾರ್ಕ್: ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹಿನ್ನಲೆಯಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು. ಇದು ಕಳೆದ ಮೂರು ದಿನಗಳ ಅವಧಿಯಲ್ಲಿ ಉಭಯ ನಾಯಕರ ಎರಡನೇ ಭೇಟಿಯಾಗಿದೆ.

‘ನಮ್ಮ ನಡುವಿನ ಮಾತುಕತೆಗಳು ಧನಾತ್ಮಕವಾಗಿ ಸಾಗುತ್ತಿವೆ.. ಮತ್ತು ಶೀಘ್ರವೇ ನಾವೊಂದು ವಾಣಿಜ್ಯ ಒಪ್ಪಂದಕ್ಕೆ ಬರಲಿದ್ದೇವೆ ಎಂದು ನನಗೆ ಅನ್ನಿಸುತ್ತಿದೆ’ ಎಂದು ಡೊನಾಲ್ಡ್ ಟ್ರಂಪ್ ಅವರು ಈ ದ್ವಿಪಕ್ಷೀಯ ಭೇಟಿಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಎರಡೂ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎರಡೂ ದೇಶಗಳ ನಾಯಕರು ಯಾವುದಾದರೂ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆಯೇ ಎನ್ನುವ ಪ್ರಶ್ನೆಗೆ ಉತ್ತರವಾಗಿ ಟ್ರಂಪ್ ಅವರು ಈ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

ಈ ದ್ವಿಪಕ್ಷೀಯ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಜೊತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಕೇಂದ್ರ ವಾಣಿಜ್ಯ ಹಾಗೂ ಉದ್ದಿಮೆ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಮತ್ತು ಇತರೇ ಅಧಿಕಾರಿಗಳು ಹಾಜರಿದ್ದರು. ಎರಡೂ ದೇಶಗಳ ನಡುವೆ ಉದ್ಭವಿಸಿರುವ ಕೆಲವೊಂದು ವ್ಯವಹಾರ ಸಂಬಂಧಿ ವಿಚಾರಗಳನ್ನು ಬಗೆಹರಿಸಿಕೊಂಡು ದ್ವಿಪಕ್ಷೀಯ ವ್ಯಾಪಾರ ಸಂಬಂಧ ವೃದ್ಧಿಗೆ ಈ ಮಾತುಕತೆಗಳು ನಡೆಯುತ್ತಿವೆ.

ಅಮೆರಿಕಾ ನಿಯೋಗದ ನೇತೃತ್ವವನ್ನು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪೈ ಅವರು ವಹಿಸಿಕೊಂಡಿದ್ದರು.

‘ಟ್ರಂಪ್ ಅವರು ಹ್ಯೂಸ್ಟನ್ ಗೆ ಆಗಮಿಸಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರು ನನ್ನ ಗೆಳೆಯ ಮಾತ್ರವಲ್ಲ ಅವರು ಭಾರತದ ಅತ್ಯುತ್ತಮ ಗೆಳೆಯ ಕೂಡಾ ಆಗಿದ್ದಾರೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಕಳೆದ ಜೂನ್ ತಿಂಗಳಿನಲ್ಲಿ ಟ್ರಂಪ್ ಆಡಳಿತವು ಸಾಮಾನ್ಯ ಆದ್ಯತಾ ವ್ಯವಸ್ಥೆಯಲ್ಲಿ (ಜಿ.ಎಸ್.ಪಿ.) ಭಾರತಕ್ಕೆ ನೀಡಲಾಗಿದ್ದ ಫಲಾನುಭವಿ ಅಭಿವೃದ್ಧಿಶೀಲ ರಾಷ್ಟ್ರದ ಮಾನ್ಯತೆಯನ್ನು ತೆಗೆದುಹಾಕಿತ್ತು. ಜಿ.ಎಸ್.ಪಿ.ಯು ಅಮೆರಿಕಾದ ಅತೀ ಹಳೆಯದಾಗಿರುವ ವ್ಯಾಪಾರ ಆದ್ಯತಾ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಮತ್ತು ಈ ನೀತಿಯ ಅಡಿಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಸಾವಿರಾರು ಉತ್ಪನ್ನಗಳನ್ನು ಸುಂಕರಹಿತವಾಗಿ ಅಮೆರಿಕಾ ತನ್ನ ದೇಶಕ್ಕೆ ಆಮದು ಮಾಡಿಕೊಳ್ಳುತ್ತದೆ ಮತ್ತು ಈ ಮೂಲಕ ಆ ರಾಷ್ಟ್ರಗಳ ಆರ್ಥಿಕ ಅಭಿವೃದ್ದಿಗೆ ತನ್ನ ಸಹಕಾರವನ್ನು ನೀಡುತ್ತದೆ.

ಕಳೆದ ಜೂನ್ ತಿಂಗಳಿನಲ್ಲಿ ಅಮೆರಿಕಾವು ಭಾರತದಿಂದ ತನ್ನ ದೇಶಕ್ಕೆ ರಫ್ತಾಗುತ್ತಿದ್ದ ರಾಸಾಯನಿಕಗಳು, ಪ್ಲಾಸ್ಟಿಕ್, ಚರ್ಮದ ಉತ್ಪನ್ನಗಳು ಮತ್ತು ರಬ್ಬರ್ ಉತ್ಪನ್ನಗಳು ಹಾಗೂ ಆಟೋ ಬಿಡಿಭಾಗಗಳು ಸೇರಿದಂತೆ ಸುಮಾರು 5.7 ಬಿಲಿಯನ್ ಡಾಲರ್ ಮೌಲ್ಯದ ಉತ್ಪನ್ನಗಳ ಆಮದು ಸುಂಕ ರಿಯಾಯ್ತಿಯನ್ನು ತೆಗೆದುಹಾಕಿತ್ತು. ಇದಕ್ಕೆ ಪ್ರತಿಯಾಗಿ ಭಾರತವು ಅಮೆರಿಕಾದಿಂದ ಆಮದಾಗುತ್ತಿದ್ದ ಸುಮಾರು 28 ಉತ್ಪನ್ನಗಳಿಗೆ ಹೆಚ್ಚಿನ ಸುಂಕ ವಿಧಿಸುವ ಮೂಲಕ ಪ್ರತ್ಯುತ್ತರ ನೀಡಿತ್ತು. ಇದರಲ್ಲಿ ಅಮೆರಿಕಾದಿಂದ ದೊಡ್ಡ ಪ್ರಮಾಣದಲ್ಲಿ ಆಮದಾಗುತ್ತಿದ್ದ ಬಾದಾಮಿ, ಸೇಬು ಹಣ್ಣು ಮತ್ತು ಅಕ್ರೋಡು ಹಣ್ಣುಗಳು ಸೇರಿತ್ತು.

2018ರಲ್ಲಿ ಭಾರತವು 543 ಮಿಲಿಯನ್ ಡಾಲರ್ ಮೌಲ್ಯದ ಬಾದಾಮಿಯನ್ನು ಅಮೆರಿಕಾದಿಂದ ಆಮದು ಮಾಡಿಕೊಂಡಿತ್ತು. ಮತ್ತು ಅಮೆರಿಕಾದ ಸೇಬು ಹಣ್ಣುಗಳಿಗೆ ಭಾರತವು ಎರಡನೇ ಅತೀದೊಡ್ಡ ಮಾರುಕಟ್ಟೆಯಾಗಿದೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.