ನಾವು ವಿಶ್ವಸಂಸ್ಥೆಗೆ ದೂರು ನೀಡುತ್ತೇವೆ; ಎಲ್ಲಾ ಕಡೆ ಹೋರಾಡುತ್ತೇವೆ
370 ರದ್ದು ಬಗ್ಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ
Team Udayavani, Aug 6, 2019, 7:49 PM IST
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಭಾರತದ ತೀರ್ಮಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂಬುದಕ್ಕೆ ಗೊಂದಲದಲ್ಲಿರುವ ಪಾಕಿಸ್ಥಾನ, ಇದೀಗ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಹೇಳಿದೆ.
370 ರದ್ದತಿ ಕುರಿತು ಪಾಕಿಸ್ಥಾನದಲ್ಲಿ ತರಾತುರಿಯಲ್ಲಿ ಸಂಸತ್ತಿನ ಜಂಟಿ ಅಧಿವೇಶನ ಕರೆಯಲಾಗಿದ್ದು, ಈ ವೇಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ದೂರು ನೀಡುವುದಾಗಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಅಲ್ಲದೇ ಜಮ್ಮು ಕಾಶ್ಮೀರದ ಭೂಪ್ರದೇಶದ ಗುರುತಿನಲ್ಲಿ ಭಾರತ ಬದಲಾವಣೆ ಮಾಡಿರುವುದು ಜಿನೇವಾ ಒಪ್ಪಂದದ ಉಲ್ಲಂಘನೆ ಎಂದು ಹೇಳಿದ್ದಾರೆ.
ಭಾರತದ ಈ ಕ್ರಮದ ವಿರುದ್ಧ ನಾವು ಪ್ರತಿಯೊಂದು ಕಡೆ ಹೋರಾಟ ನಡೆಸುತ್ತೇವೆ. ಈ ವಿಚಾರವನ್ನು ಅಂತಾರಾಷ್ಟ್ರೀಯ ಕೋರ್ಟ್‌ಗೆ ಕೊಂಡೊಯ್ಯುವ ಬಗ್ಗೆಯೂ ಆಲೋಚಿಸುತ್ತೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಅತ್ತ ಪಾಕ್ ಸೇನಾ ಮುಖ್ಯಸ್ಥ ಜಾವೇದ್ ಬಾಜ್ವಾ ಕಾಶ್ಮೀರಿಗಳಿಗಾಗಿ ನಾವು ಯಾವುದೇ ಕೆಲಸಕ್ಕೂ ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.