Social Media; ಈ ದೇಶದಲ್ಲಿ ವಾಟ್ಸ್ಯಾಪ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಬಳಕೆ ನಿಷೇಧ!
Team Udayavani, Aug 3, 2024, 3:44 PM IST
ಹೊಸದಿಲ್ಲಿ: ಸಾಮಾಜಿಕ ಜಾಲತಾಣ ವೇದಿಕೆಗಳಾದ ವಾಟ್ಸ್ಯಾಪ್, ಇನ್ಸ್ಟಾಗ್ರಾಮ್, ಟಿಕ್ ಟಾಕ್ ಮತ್ತು ಯೂಟ್ಯೂಬ್ ಗಳನ್ನು ನಿಷೇಧ ಮಾಡಿ ಭಾರತದ ನೆರೆ ದೇಶ ಬಾಂಗ್ಲಾದೇಶ (Bangladesh) ಆದೇಶಿಸಿದೆ. ಸರ್ಕಾರಿ ಉದ್ಯೋಗಗಳಿಗೆ ಕೋಟಾ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ನಡುವೆ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಲಾಗಿದೆ.
ದೇಶದಲ್ಲಿ ಜನರು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ಬಾಂಗ್ಲಾ ಸರ್ಕಾರ ನಿಷೇಧಿಸಿದೆ. ಈ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಗಳ ಪ್ರವೇಶವನ್ನು ಬಾಂಗ್ಲಾದೇಶದಾದ್ಯಂತ ಸೀಮಿತ ಮಾಡಲಾಗಿದೆ. ಈ ವಿಚಾರವನ್ನು ಗ್ಲೋಬಲ್ ಐಸ್ ನ್ಯೂಸ್ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ವರದಿ ಮಾಡಿದೆ.
ಟರ್ಕಿ ದೇಶವೂ ಇದೇ ರೀತಿಯ ನಿಷೇಧ ಮಾಡಿದೆ. ಟರ್ಕಿಯಲ್ಲಿ ಇನ್ಸ್ಟಾಗ್ರಾಮ್ ಆಪ್ ಬಳಕೆ ಮಾಡುವುದನ್ನು ನಿಷೇಧಿಸಿದೆ. ಬಾಂಗ್ಲಾದೇಶದಲ್ಲಿ ಮೆಟಾ ಜಾಲತಾಣಗಳಿಗೆ ನಿರ್ಬಂಧ ಹೇರಿರುವುದು ಇದೇ ಮೊದಲೇನಲ್ಲ.
Breaking
The Bangladeshi government has banned Instagram, TikTok, WhatsApp, and YouTube in the country. pic.twitter.com/ct12j8QPyn
— Global Eyes (@Global__Eyes) August 2, 2024
ಜುಲೈನಿಂದಲೇ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಬ್ಯಾನ್ ಮಾಡಲಾಗಿತ್ತು. ಏತನ್ಮಧ್ಯೆ, ಜುಲೈ 23 ರಂದು ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಭಾಗಶಃ ಮರು ಸ್ಥಾಪಿಸಲಾಯಿತು, ಜುಲೈ 28 ರವರೆಗೆ ಮೊಬೈಲ್ ನೆಟ್‌ವರ್ಕ್ ಗಳು ಆಫ್ ಲೈನ್ ನಲ್ಲಿದ್ದವು. ಕೋಟಾ ಸುಧಾರಣೆಗಳ ಕುರಿತು ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಪ್ರತಿಭಟನೆಯ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.