ಭಾರತದಲ್ಲಿ ನ್ಯಾಯೋಚಿತ ಚುನಾವಣೆಗೆ ಸಕಲ ಯತ್ನ: ಝುಕರ್‌ಬರ್ಗ್
Team Udayavani, Apr 11, 2018, 3:45 PM IST
ವಾಷಿಂಗ್ಟನ್ : ಭಾರತ ಮತ್ತು ಇತರ ದೇಶಗಳಲ್ಲಿ ನ್ಯಾಯೋಚಿತ ಚುನಾವಣೆಗಳು ನಡೆಯುವಂತಾಗಲು ತನ್ನ ಕಂಪೆನಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಿದೆ ಎಂದು 33ರ ಹರೆಯದ ಫೇಸ್ ಬುಕ್ ಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಹೇಳಿದ್ದಾರೆ.
ಇಡಿಯ ಜಗತ್ತಿಗೆ 2018 ಬಹಳ ಮುಖ್ಯವಾದ ವರ್ಷ. ಏಕೆಂದರೆ ಈ ವರ್ಷ ಭಾರತ, ಪಾಕಿಸ್ಥಾನ ಮತ್ತು ಇತರ ಅನೇಕ ದೇಶಗಳಲ್ಲಿ ಚುನಾವಣೆಗಳು ನಡೆಯಲಿಕ್ಕಿವೆ. ಈ ಚುನಾವಣೆಗಳು ನ್ಯಾಯೋಚಿತವಾಗಿ ಮತ್ತು ಸುರಕ್ಷಿತವಾಗಿ ನಡೆಯುವಂತಾಗಲು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ನಾವು ಮಾಡುತ್ತೇವೆ ಎಂದು ಝುಕರ್‌ಬರ್ಗ್ ಅಮೆರಿಕದ ಕ್ಯಾಪಿಟೋಲ್ ಹಿಲ್‌ನಲ್ಲಿ ನ್ಯಾಯಾಂಗ ಮತ್ತು ವಾಣಿಜ್ಯ ಸೆನೆಟ್ ಸಮಿತಿಯ ಜಂಟಿ ಸಭೆಯಲ್ಲಿ ಹೇಳಿದರು.
ಭಾರತ, ಹಂಗರಿ ಮತ್ತು ಬ್ರಝಿಲ್ ಸೇರಿದಂತೆ ಹಲವು ದೇಶಗಳಲ್ಲಿ ನಡೆಯುವ ಚುನಾವಣೆಗಳ ಮಹತ್ವವನ್ನು ನಾವು ಚೆನ್ನಾಗಿ ಅರಿತಿದ್ದೇವೆ ಎಂದು ಝುಕರ್‌ಬರ್ಗ್ ಹೇಳಿದರು.
ಕೋಟ್ಯಂತರ ಫೇಸ್ ಬುಕ್ ಬಳಕೆದಾರರ ಖಾಸಗಿ ಮಾಹಿತಿಗಳನ್ನು ಬ್ರಿಟನ್‌ನ ಕೇಂಬ್ರಿಜ್ ಅನಾಲಿಟಿಕಾ ಸಂಸ್ಥೆ ಕದ್ದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕಕ್ಕೆ ಉತ್ತರದಾಯಿಯಾಗಿ ಝುಕರ್‌ಬರ್ಗ್ ಪ್ರಮಾಣೀಕೃತ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.