ಜಯದಿಂದ ಬಾಂಧವ್ಯಕ್ಕೆ ಧಕ್ಕೆ: ಚೀನ ಪತ್ರಿಕೆ
Team Udayavani, Mar 17, 2017, 8:20 AM IST
ಬೀಜಿಂಗ್: ಉತ್ತರ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಈಗ ಚೀನ ಮಾಧ್ಯಮಗಳಲ್ಲಿಯೂ ಪ್ರತಿಧ್ವನಿಸುವಂತೆ ಮಾಡಿದೆ. ಅಷ್ಟೇ ಅಲ್ಲ ಸಹಜವಾಗಿ ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆ ಆಗಲೂಬಹುದೆನ್ನುವ ಅಭಿಪ್ರಾಯ ವ್ಯಕ್ತಪಡಿಸಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನ (ಸಿಪಿಸಿ) ಒಡೆತನದಲ್ಲಿರುವ “ಗ್ಲೋಬಲ್ ಟೈಮ್ಸ್’ ಪತ್ರಿಕೆಯಲ್ಲಿ ಬರೆದಿರುವ ಲೇಖನದಲ್ಲಿ ಉಲ್ಲೇಖೀಸಲಾಗಿದೆ. “ಪ್ರಧಾನಿ ಮೋದಿ ಒರಟುತನದ ನಡವಳಿಕೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸಬೇಕಾಗಿ ಬರಬಹುದು. ಚೀನದೊಂದಿಗಿನ ಬಾಂಧವ್ಯದ ಮೇಲೆ ಗಂಭೀರ ಪರಿಣಾಮವೂ ಬೀರಲಿದೆ. ಮೋದಿ ಚೀನ ವಿರುದ್ಧ ಗಂಭೀರವಾದ ನಿಲುವು ತಾಳುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ ಎಂದು ಪರೋಕ್ಷವಾಗಿ ಎಚ್ಚರಿಸುವ ಲೇಖನ ಪ್ರಕಟಿಸಿದೆ. ಇದೇ ವೇಳೆ, 2019ರಲ್ಲಿ ನಡೆಯಲಿರುವ ಚುನಾವಣೆಗೆ ಮೋದಿ ಅವರು ಈ ಪ್ರಚಂಡ ಜಯದ ಮೂಲಕ ವೇದಿಕೆ ನಿರ್ಮಿಸಿಕೊಂಡಿದ್ದಾರೆ ಎಂದೂ ಬರೆಯಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.