ಭಾರತದ ಬೇಡಿಕೆಗಳಿಗೆ ಡಬ್ಲ್ಯುಟಿಒ ಸಮ್ಮತಿ; ಮೀನುಗಾರಿಕೆ,ಲಸಿಕೆ ಉತ್ಪಾದನೆ ಸೇರಿ ಹಲವು ಒಪ್ಪಂದ
Team Udayavani, Jun 18, 2022, 7:15 AM IST
ಜಿನೇವಾ: ಸತತ 5 ರಾತ್ರಿಗಳ ಸಂವಾದದ ಬಳಿಕ ಕೊನೆಗೂ ವಿಶ್ವ ವ್ಯಾಪಾರ ಸಂಸ್ಥೆ(ಡಬ್ಲ್ಯುಟಿಒ)
ಯ 164 ಸಚಿವರು ಭಾರತದ ಬೇಡಿಕೆಗಳಿಗೆ ಸಮ್ಮತಿಸಿದ್ದಾರೆ. ಅತಿಯಾದ ಮೀನುಗಾರಿಕೆಗೆ ತಡೆ, ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಕೊರೊನಾ ಲಸಿಕೆಗಳ ಉತ್ಪಾದನೆ ಹೆಚ್ಚಳ ಮತ್ತು 27 ವರ್ಷಗಳಷ್ಟು ಹಳೆಯ ವ್ಯಾಪಾರ ಸಂಸ್ಥೆಯಲ್ಲಿ ಸುಧಾರಣೆ ಸೇರಿದಂತೆ ಕೆಲವು ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ನಾಲ್ಕೂವರೆ ವರ್ಷಗಳ ಬಳಿಕ ನಡೆದ ಮೊದಲ ಸಚಿವರ ಸಮ್ಮೇಳನವು ಸಮಾಪ್ತಿಯಾಗಿದೆ.
ಅಕ್ರಮ, ಅನಿಯಂತ್ರಿತ ಮೀನುಗಾರಿಕೆಗೆ ನಿರ್ಬಂಧ, ವಿಶ್ವದ ಸಾಗರಗಳಲ್ಲಿ ಅತಿಯಾದ ಮೀನುಗಾರಿಕೆಗೆ ತಡೆ, ಮೀನುಗಾರಿಕಾ ಕ್ಷೇತ್ರದಲ್ಲಿ ಸರ್ಕಾರಿ ಸಬ್ಸಿಡಿಗೆ ಮತ್ತು ಅತಿಯಾದ ಆಪರೇಟರ್‌ಗಳಿಗೆ ನಿಯಂತ್ರಣ ಹೇರುವ ಒಪ್ಪಂದಗಳನ್ನು ಕೈಗೊಳ್ಳಲಾಗಿದೆ.
ಇದು ಮೀನುಗಾರಿಕೆಯನ್ನು ಅವಲಂಬಿಸಿರುವ 260 ದಶಲಕ್ಷ ಮಂದಿಯ ಜೀವನೋಪಾಯಕ್ಕೆ ಸಂಬಂಧಿಸಿದ ವಿಚಾರವಾಗಿರುವ ಕಾರಣ ಒಕ್ಕೊರಲಿನಿಂದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಡಬ್ಲ್ಯುಟಿಒ ಮುಖ್ಯಸ್ಥ ಒಕೋಂಜೋ ಇವಿಯಾಲಾ ಹೇಳಿದ್ದಾರೆ.
ವಿಶ್ವಸಂಸ್ಥೆಯ ವಿಶ್ವ ಆಹಾರ ಯೋಜನೆಯ ಮೇಲೆ ಹೇರಿರುವ ರಫ್ತು ನಿರ್ಬಂಧವನ್ನು ವಾಪಸ್ ಪಡೆಯಲು ಕೂಡ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಭಾರತಕ್ಕೆ ಶೇ.100ರ ಯಶಸ್ಸು: ಗೋಯಲ್
ದೀರ್ಘಕಾಲದಿಂದ ನನೆಗುದಿಗೆ ಬಿದ್ದಿದ್ದ ಅಂಶಗಳಲ್ಲಿ ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯ ಸಮ್ಮೇಳನದಲ್ಲಿ ಭಾರತಕ್ಕೆ ಶೇ.100ರಷ್ಟು ಯಶಸ್ಸು ದೊರೆತಿದೆ. ಕಳೆದ ಹಲವಾರು ವರ್ಷಗಳಿಂದೀಚೆಗೆ ನಡೆದ ಯಶಸ್ವಿ ಸಭೆ ಇದಾದಿದ್ದು, ಸಕಾರಾತ್ಮಕ ಫಲಿತಾಂಶ ಲಭ್ಯವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಡಬ್ಲ್ಯುಟಿಒ ಒಪ್ಪಂದದಲ್ಲಿ ಭಾರತವು ಜಾಗತಿಕ ನಾಯಕನ ಪಾತ್ರ ವಹಿಸಿತ್ತು ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.