![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 10, 2021, 11:37 AM IST
ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನ ಶನಿವಾರ(ಏಪ್ರಿಲ್ 10) ಬೆಳಗ್ಗೆ 7ಗಂಟೆಗೆ ಆರಂಭಗೊಂಡಿದ್ದು, 44 ಕ್ಷೇತ್ರಗಳಲ್ಲಿ 9ಗಂಟೆವರೆಗೆ ದಾಖಲೆ ಪ್ರಮಾಣದ ಶೇ.16ರಷ್ಟು ಮತ ಚಲಾವಣೆಯಾಗಿರುವುದಾಗಿ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
44 ವಿಧಾನಸಭಾ ಕ್ಷೇತ್ರಗಳಲ್ಲಿ 15,940 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಗ್ಗೆ 7ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6.30ರವರೆಗೆ ಮತದಾನ ನಡೆಯಲಿದೆ. 2016ರ ಚುನಾವಣೆಯಲ್ಲಿ 44 ಕ್ಷೇತ್ರಗಳಲ್ಲಿ ಆಡಳಿತಾರೂಢ ಟಿಎಂಸಿ ನಾಲ್ಕು ಕ್ಷೇತ್ರಗಳಲ್ಲಿ ಪರಾಜಯಗೊಂಡಿತ್ತು.
ನಾಲ್ಕನೆ ಹಂತದ ಮತದಾನದಲ್ಲಿ ಕೇಂದ್ರ ಸಚಿವ ಬಬುಲ್ ಸುಪ್ರಿಯೋ, ಮಾಜಿ ಟಿಎಂಸಿ ಮುಖಂಡ ರಾಜೀವ್ ಬ್ಯಾನರ್ಜಿ ಸೇರಿದಂತೆ ಘಟಾನುಘಟಿಗಳ ಭವಿಷ್ಯವನ್ನು ಇಂದು ಮತದಾರರು ನಿರ್ಧರಿಸಲಿದ್ದಾರೆ.
ಬೆಳಗ್ಗೆ 9ಗಂಟೆವರೆಗೆ ಪಶ್ಚಿಮಬಂಗಾಳದ ಕೋಚ್ ಬೆಹರ್ ಕ್ಷೇತ್ರದಲ್ಲಿ ಶೇ.15.39, ಅಲಿಪುರ್ ದುರ್ ಶೇ.17.97, ಹೌರಾ ಶೇ.17.48, ದಕ್ಷಿಣ ಪರಾಗಣಾಸ್ ಶೇ.13.26, ಹೂಗ್ಲಿ ಶೇ.17.04ರಷ್ಟು ದಾಖಲೆಯ ಮತದಾನವಾಗಿದೆ ಎಂದು ವಿವರಿಸಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಹಿಂಸಾಚಾರ ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ವರದಿ ತಿಳಿಸಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.