ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!
Team Udayavani, Mar 15, 2021, 9:46 AM IST
ಚೆನ್ನೈ: ತಮಿಳು ನಾಡು ವಿಧಾನಸಭಾ ಚುನಾವಣೆಯ ಪ್ರಚಾರ ಮುಗಿಸಿ ಹೋಟೆಲ್ ಗೆ ತೆರಳುತ್ತಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಮೇಲೆ ದಾಳಿ ನಡೆಸಿದ ಪ್ರಕರಣ ರವಿವಾರ ತಡರಾತ್ರಿ ನಡೆದಿದೆ.
ತಮಿಳುನಾಡಿನ ಕಾಂಚಿಪುರಂನಲ್ಲಿ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಮೇಲೆ ದಾಳಿ ನಡೆಲಾಗಿದೆ. ಹೋಟೆಲ್ ಕಡೆ ತೆರಳುತ್ತಿದ್ದ ವೇಳೆ ಯುವಕನೋರ್ವ ಕಮಲ್ ಹಾಸನ್ ಅವರ ಕಾರಿನ ಮೇಲೆ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಕಾರಿನ ವಿಂಡ್ ಸ್ಕ್ರೀನ್ ಗೆ ಹಾನಿಯಾಗಿದ್ದು, ಕಮಲ್ ಹಾಸನ್ ಗೆ ಯಾವುದೇ ಗಾಯಗಳಾಗಿಲ್ಲ.
ಇದನ್ನೂ ಓದಿ:ಪಾಕ್ ಉಗ್ರರ ಜೊತೆ ನಂಟು: ಕರ್ನಾಟಕ ಸೇರಿ 10 ಕಡೆ ಎನ್ಐಎ ದಾಳಿ, ಐವರ ಬಂಧನ
ಈ ವೇಳೆ ಯುವಕ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಎಂಎನ್ ಎಂ ಪಕ್ಷದ ಕಾರ್ಯಕರ್ತರು ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ಮಕ್ಕಳ ನೀಧಿ ಮಯ್ಯಂ ಪಕ್ಷದ ಕಾರ್ಯದರ್ಶಿ ಎ.ಜಿ.ಮೌರ್ಯ ಪ್ರತಿಕ್ರಿಯೆ ನೀಡಿದ್ದು, ಇಂತಹ ದಾಳಿಗೆ, ಕುತಂತ್ರ ರಾಜಕಾರಣಕ್ಕೆ ಪಕ್ಷ ಹೆದರುವುದಿಲ್ಲ ಎಂದಿದ್ದಾರೆ. ಅದಲ್ಲದೆ ಸೋಮವಾರ ಕಮಲ್ ಹಾಸನ್ ಕೊಯಮತ್ತೂರಿನಲ್ಲಿ ಪ್ರಚಾರ ಮಾಡಲಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: BSY ನಂತರ ಪಕ್ಷ ಸಮರ್ಥವಾಗಿ ಮುನ್ನಡೆಸುವವರಿಗಾಗಿ BJP ಹುಡುಕಾಟ: ಪಟ್ಟಿಯಲ್ಲಿದೆ ಹಲವು ಹೆಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.