‘ದೂಸ್ರಿ ಬಾರ್ ಡಬಲ್ ಎಂಜಿನ್ ಕಿ ಸರ್ಕಾರ್’ : ಕಾಂಗ್ರೆಸ್ ಗೆ ಪರೋಕ್ಷವಾಗಿ ಕುಟುಕಿದ ಮೋದಿ
Team Udayavani, Mar 21, 2021, 1:56 PM IST
ಬೊಕಾಖಾಟ್ : ಅಸ್ಸಾಂ ನಲ್ಲಿ ಮತ್ತೆ ಬಿಜೆಪಿ ಸರ್ಕಾರ ತನ್ನ ಆಡಳಿತವನ್ನು ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಸ್ಸಾಂ ನ ಬೊಕಾಖಾಟ್ ನಲ್ಲಿ ನಡೆದ ವಿಧಾನಸಭಾ ಚುನವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರದಾನಿ ಮೋದಿ, ಈಗಾಗಲೇ ನಿರ್ಧಾರವಾಗಿದೆ, ಅಸ್ಸಾಂ ನಲ್ಲಿ ಎರಡನೇ ಬಾರಿ ಬಿಜೆಪಿ ಅಧಿಕಾರ ಹಿಡಿಯಲಿದೆ, ‘ದೂಸ್ರಿ ಬಾರ್ ಬಿಜೆಪಿ ಸರ್ಕಾರ್’, ‘ದೂಸ್ರಿ ಬಾರ್ ಎನ್ ಡಿ ಎ ಸರ್ಕಾರ್’, ‘ದೂಸ್ರಿ ಬಾರ್ ಡಬಲ್ ಎಂಜಿನ್ ಕಿ ಸರ್ಕಾರ್’ ಎಂದು ಪರೋಕ್ಷವಾಗಿ ಕಾಂಗ್ರೆಸ್ ಗೆ ಚಾಟಿ ಏಟು ನೀಡಿದ್ದಾರೆ.
ಓದಿ : 100 ಕೋಟಿ ಲಂಚ ಆರೋಪ : ಗೃಹ ಮಂತ್ರಿ ಸ್ಥಾನದಿಂದ ಅನಿಲ್ ದೇಶ್ ಮುಖ್ ಔಟ್..?
ಇನ್ನು, ಅಸ್ಸಾಂ ನಲ್ಲಿ ಪರಿಸರ ಸಂರಕ್ಷಣೆಗಾಗಿ ಬಿಜೆಪಿ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಮೋದಿ ಮಾತನಾಡಿದರು.
ಖಡ್ಗಮೃಗ ಬೇಟೆಗಾರರನ್ನು ಎನ್ ಡಿ ಎ ಸರ್ಕಾರ ಜೈಲಲ್ಲಿರಿಸಿದೆ. ನಾವು ಅಸ್ಸಾಂ ನ ಪ್ರಾಣಿ ಪಕ್ಷಿಗಳ ಸಂರಕ್ಷಣೆಯ ಜೊತೆಗೆ, ಜನರಿಗೆ ಬೇಕಾದ ಸೌಲಭ್ಯಗಳನ್ನು ಕೂಡ ಒದಗಿಸಿದ್ದೇವೆ ಎಂದು ಹೇಳಿದ್ದಾರೆ.
ಅಸ್ಸಾಂ ನಲ್ಲಿ ಬಿಜೆಪಿ ಆಡಳಿತದಲ್ಲಿ ಅರಣ್ಯ ವ್ಯಾಪ್ತಿಗೆ ಸಂಬಂಧಪಟ್ಟಂತೆ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾದದ್ದನ್ನು ನಾವು ಕಾಣಬಹುದು. ಇದು ಪ್ರವಾಸೋದ್ಯಮಕ್ಕೆ ಹಾಗೂ ಆರ್ಥಿಕ ಚಟುವಟಿಕೆಗೆ ಪ್ರೋತ್ಸಾಹವನ್ನು ನೀಡಿದೆ. ನೈಸರ್ಗಿಕ, ಆದ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಪಾರಂಪರಿಕ ಪ್ರವಾಸೋದ್ಯಮಗಳಲ್ಲಿ ಭಾರತವನ್ನು ಪ್ರಮುಖ ರಾಷ್ಟ್ರಗಳಲ್ಲಿ ಸೇರಿಸಬೇಕೆಂದು ನಾವು ಬಯಸುತ್ತೇವೆ. ಅಸ್ಸಾಂ ಈ ಎಲ್ಲಾ ಗುಣ ಲಕ್ಷಣವನ್ನು ಹೊಂದಿದೆ. ಎನ್ ಡಿ ಎ ಸರ್ಕಾರದ ಅಡಿಯಲ್ಲಿ ಅಸ್ಸಾಂ ಉನ್ನತ ಮಟ್ಟಕ್ಕೆರುತ್ತಿದೆ ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ.
ಇನ್ನು, ಕಾಂಗ್ರೆಸ್ ನನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ, ಕೇಂದ್ರದಲ್ಲಿ ಹಾಗೂ ಅಸ್ಸಾಂ ನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿತ್ತು. ಕಾಂಗ್ರೆಸ್ ಅಂದರೆ ಅಸ್ಥಿರತೆ ಹಾಗೂ ಭ್ರಷ್ಟಾಚಾರವೆಂದು ನೀವು ನೆನಪಿನಲ್ಲಿಟ್ಟುಕೊಳ್ಳಬೇಕು. ಒಳ್ಳೆಯದನ್ನು ಮಾಡುವುದಕ್ಕೆ ಅವರಲ್ಲಿ ಯಾವುದೇ ಒಳ್ಳೆಯ ದೃಷ್ಟಿ ಮತ್ತು ಉದ್ದೇಶ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಓದಿ : ಬೇಕಿದ್ದರೆ ನಳಿನ್ ಕಟೀಲ್ ಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ: ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.