ಸೋನೊವಾಲ್ ಅಧಿಕಾರದಲ್ಲಿ ಉಳಿಯುತ್ತಾರೆಯೇ ಎಂಬುವುದು ಪ್ರಶ್ನೆಯಲ್ಲ.. : ಅಸ್ಸಾಂ ಸಿಎಂ
Team Udayavani, Mar 28, 2021, 2:57 PM IST
ಗುವಾಹಟಿ : ಅಸ್ಸಾಂ ನಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರವನ್ನು ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸರಬಾನಂದ ಸೋನೊವಾಲ ಭರವಸೆ ವ್ಯಕ್ತ ಪಡಿಸಿದ್ದಾರೆ.
ಮೊದಲ ಹಂತದ ಅಸ್ಸಾಂ ನ ವಿಧಾನ ಸಭಾ ಚುನಾವಣೆಯ ಪ್ರಮುಖ ಅಭ್ಯರ್ಥಿಯಾಗಿದ್ದ ಸೋನೊವಾಲ, ಮೊದಲ ಹಂತದ ಚುನಾವಣೆಯಿಂದ ದೊರಕಿದ ಪ್ರತಿಕ್ರಿಯೆಯ ಮೇರೆಗೆ ಈ ಭರವಸೆಯನ್ನು ನೀಡಿದ್ದು, ಅಭಿವೃದ್ಧಿ ಕಾರ್ಯಗಳಿಂದ ಹಾಗೂ ರಾಜ್ಯದಲ್ಲಿ ಶಾಂತಿಯನ್ನು ತಂದಿರುವ ಕಾರಣದಿಂದ ನಮ್ಮ ಸರ್ಕಾರ ಅಸ್ಸಾಂ ನ ಜನರ ಪ್ರೀತಿಯನ್ನು, ವಿಶ್ವಾಸವನ್ನು ಗಳಿಸಿದೆ ಎಂದು ಅವರು ಹೇಳಿದ್ದಾರೆ.
ಓದಿ : ಸಿಡಿ ಬಗ್ಗೆ ಮಾತನಾಡಲು ನನಗೆ ವಾಕರಿಕೆ ಬರುತ್ತದೆ. ನನಗೆ ಯಾವುದೇ ಆಸಕ್ತಿಯಿಲ್ಲ: ಈಶ್ವರಪ್ಪ
ಐದು ವರ್ಷಗಳ ಹಿಂದೆ ನಾವು ಇಲ್ಲಿ ನಮ್ಮ ಸರ್ಕಾರವನ್ನು ಪ್ರಾರಂಭಿಸಿದಾಗ ಉತ್ತಮ ಆಡಳಿತವನ್ನು ಖಾತರಿ ಪಡಿಸುವುದಕ್ಕೆ ಹಲವಾರು ಸವಾಲನ್ನು ಎದುರಿಸಬೇಕಾಯಿತು. ಅಸ್ಸಾಂ ನಲ್ಲಿದ್ದ ಭ್ರಷ್ಟಾಚಾರ, ಉಗ್ರಗ್ರಾಮಿಗಳು ಹಾಗೂ ಅಕ್ರಮ ವಲಸಿಗರಿಂದ ರಾಜ್ಯವನ್ನು ರಕ್ಷಣೆ ಮಾಡಲು, ಮುಕ್ತಗೊಳಿಸಲು ನಾವು ಹರಸಾಹಸ ಪಡಬೇಕಾಯಿತು. ನಾವು ಜನ ಪರ ಕಾರ್ಯಗಳನ್ನು ಮಾಡುವುದರ ಮೂಲಕ ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದೇವೆ. ಅವರ ನಂಬಿಕೆಯನ್ನು ಉಳಿಸಿಕೊಂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಜನರು ನಮ್ಮ ಮೇಲೆ ಈಗ ಅಪಾರವಾದ ನಂಬಿಕೆಯನ್ನು ಹೊಂದಿದ್ದಾರೆ. ಬಿಜೆಪಿ ಇದ್ದಲ್ಲಿ ರಕ್ಷಣೆ, ಅಭಿವೃದ್ಧಿ, ಶಾಂತಿ ಇರುತ್ತದೆ ಎಂದು ಜನರಿಗೆ ಈಗ ಗೊತ್ತಾಗಿದೆ ಎಂದು ಸರಬಾನಂದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೋನೊವಾಲ್ ಅಧಿಕಾರದಲ್ಲಿ ಉಳಿಯುತ್ತಾರೆಯೇ ಎಂಬುವುದು ಪ್ರಶ್ನೆಯಲ್ಲ. ಬಿಜೆಪಿ ಉತ್ತಮ ಕೆಲಸ ಮಾಡಿದೆ. ಬಿಜೆಪಿ ಅಸ್ಸಾಂ ನಲ್ಲಿ ಮತ್ತೆ ಅಧಿಕಾರ ಹಿಡಿಯಬೇಕೆಂಬುವುದು ನಮ್ಮ ಆಶಯ. ಪ್ರಧಾನಿ ಮೋದಿಯವರ ಆಶೀರ್ವಾದ ನಮ್ಮೆಲ್ಲರ ಮೇಲಿದೆ. ಎಲ್ಲಾ ಮಂತ್ರಿಗಳು ನಮಗೆ ಪ್ರೋತ್ಸಾಹಿಸಿದ್ದಾರೆ.
ಇನ್ನು, ಬಿಜೆಪಿ ಸರ್ಕಾರವು ದೋಷರಹಿತ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು (ಎನ್‌ಆರ್‌ಸಿ) ತರುತ್ತದೆ ಮತ್ತು ಯಾವುದೇ “ಅಕ್ರಮ ವಲಸಿಗರು” ರಾಜ್ಯದಲ್ಲಿ ಉಳಿಯದಂತೆ ನೋಡಿಕೊಳ್ಳುತ್ತದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.