Udupi ಪರ್ಯಾಯೋತ್ಸವಕ್ಕೆ ಜಿಲ್ಲಾಡಳಿತದ ಸಿದ್ಧತೆ
Team Udayavani, Jan 16, 2024, 11:30 PM IST
ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಸ್ವಚ್ಛತೆ, ಮೊಬೈಲ್ ಶೌಚಾಲಯ, ಕುಡಿಯುವ ನೀರು ಸಹಿತ ನಗರದ ಅಂದ, ಚಂದ ಹೆಚ್ಚಿಸುವುದು ಸೇರಿ ಅಗತ್ಯ ಮೂಲ ಸೌಕರ್ಯದ ವಿಭಾಗವನ್ನು ನಗರಸಭೆಯಿಂದ ನಿರ್ವಹಿಸಲಾಗುತ್ತಿದೆ. ಪಾರ್ಕಿಂಗ್, ಪರ್ಯಾಯ ಮೆರವಣಿಗೆ ಸೇರಿದಂತೆ ಶ್ರೀಕೃಷ್ಣ ಮಠದ ಸುತ್ತಲು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಯಾವುದೇ ಸಮಸ್ಯೆಯಲ್ಲಿ ನೆರವೇರಲು ಪೊಲೀಸ್ ಇಲಾಖೆಯಿಂದ ಕಣ್ಗಾವಲು ಮಾಡಲಾಗುತ್ತಿದೆ.
8 ಆ್ಯಂಬುಲೆನ್ಸ್
ಆರೋಗ್ಯ ಇಲಾಖೆಯಿಂದ ತುರ್ತು ಸೇವೆಗೆ ಅನುಕೂಲವಾಗುವಂತೆ 8 ಆ್ಯಂಬುಲೆನ್ಸ್‌ಗಳನ್ನು ಸಿದ್ಧಪಡಿಸಿಕೊಳ್ಳ ಲಾಗಿದೆ. ಅಗ್ನಿಶಾಮಕ ದಳದಿಂದ ಅಗತ್ಯ ಅಗ್ನಿಶಾಮಕ ವಾಹನವನ್ನು ಸಜ್ಜುಗೊಳಿಸಿಕೊಳ್ಳಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾ ತಂಡಗಳನ್ನು ಮೆರವಣಿಗೆ ಜೋಡಿಸುವುದು, ಪ್ರವಾಸೋದ್ಯಮ ಇಲಾಖೆಯಿಂದ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡುವ ಕಾರ್ಯ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಪರ್ಯಾಯದ ಯಶಸ್ವಿಗಾಗಿ ಅಣಿಯಾಗುತ್ತಿವೆ.
ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಪರ್ಯಾಯ ಮಹೋತ್ಸವಕ್ಕೆ ಹಿಂದಿನಿಂದಲೂ ಯಾವ ರೀತಿಯಲ್ಲಿ ಸಹಕಾರ, ವ್ಯವಸ್ಥೆ ಮಾಡಿಕೊಡಲಾಗುತ್ತಿದೆಯೋ ಅದೇ ಮಾದರಿ ಈ ಪರ್ಯಾಯದಲ್ಲೂ ಮುಂದುವರಿಸಿದ್ದೇವೆ. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯಸಾಧಿಸಲು ಅನುಕೂಲವಾಗುವಂತೆ ಈಗಾಗಲೇ ನಿರ್ದಿಷ್ಟ ಸೂಚನೆಯನ್ನು ನೀಡಲಾಗಿದೆ. ಸಚಿವರು ಸಹಿತವಾಗಿ ಸರಕಾರದ ವ್ಯವಸ್ಥೆಯೊಳಗಿನ ಗಣ್ಯರಿಗೆ ಉಡುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.