Puttige Matha Paryaya;ಕೋಟಿಗೀತಾ ಲೇಖನಯಜ್ಞ ದೀಕ್ಷಾ ಸಮಾರಂಭ:ಗೀತೋತ್ಸವಕ್ಕೆ ಚಾಲನೆ
ತೇಜಸ್ವಿನಿ ಅನಂತ ಕುಮಾರ್,ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗಿ
Team Udayavani, Jan 12, 2024, 4:22 PM IST
ಉಡುಪಿ: ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೋಟಿಗೀತಾ ಲೇಖನಯಜ್ಞ ಸಮಿತಿ ಆಶ್ರಯದಲ್ಲಿ ಬೆಂಗಳೂರಿನ ಬಸವನಗುಡಿ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಡಿ. 23ರಂದು ಗೀತೋತ್ಸವಕ್ಕೆ ಚಾಲನೆ ದೊರಕಿತು.
ಬೆಳಗ್ಗೆ ನಡೆದ ಕೋಟಿಗೀತಾ ಲೇಖನಯಜ್ಞ ದೀಕ್ಷಾ ಸಮಾರಂಭದ ಗೀತೋತ್ಸವದ ಉದ್ಘಾಟನೆಯನ್ನು ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನೆರವೇರಿಸಿ ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆ ಕೇವಲ ಪುಣ್ಯ ಗ್ರಂಥವಲ್ಲ,ಅದು ನಾವು ಎದುರಿಸುವ ಸಮಸ್ಯೆಗಳ ನಿವಾರಣೆಗೆ ಮಾರ್ಗೋಪಾಯ ಬೋಧಿಸುವ ಗ್ರಂಥ.ಗೀತೆಯಲ್ಲಿ ಹೇಳಿದಂತೆ ಜೀವನದಲ್ಲಿ ಅನುಸರಿಸಿದರೆ ಶ್ರೀಕೃಷ್ಣನಿಗೆ ಪ್ರಿಯವಾಗುತ್ತದೆ.ಆಧುನಿಕ ಕಾಲದ ಜಿಪಿಎಸ್ ಇದ್ದಂತೆ ಗೀತೆ ನಮ್ಮ ಜೀವನದಲ್ಲಿದ್ದರೆ ಅದು ಸದಾ ನಮಗೆ ಮಾರ್ಗದರ್ಶನ ತೋರುತ್ತದೆ.ಖಿನ್ನತೆ,ಮಾನಸಿಕ ಕ್ಷೋಭೆ ಮೊದಲಾದ ಮನೋವ್ಯಾಧಿಗಳು ದಿನೇದಿನೇ ಹೆಚ್ಚಾಗುತ್ತಿರುವ ಈ ಕಾಲ ಘಟ್ಟದಲ್ಲಿ ಗೀತೆಯೊಂದೇ ಅದಕ್ಕೆ ಸೂಕ್ತ ಪರಿಹಾರ.ಆದ್ದರಿಂದ ಭಕ್ತರು ಈ ಗೀತೋತ್ಸವದಲ್ಲಿ ಪಾಲ್ಗೊಂಡು ಗೀತೆ ಬರೆಯುವ ಮೂಲಕ ತಮ್ಮ ಬೌದ್ಧಿಕ ಸ್ತರವನ್ನು ವಿಸ್ತಾರ ಮಾಡಿಕೊಳ್ಳುವ ಮೂಲಕ ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಬಹುದು ಎಂದು ಆಶೀರ್ವಚನ ನೀಡಿದರು.
ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.ಮುಖ್ಯ ಅತಿಥಿಗಳಾಗಿ ಗೀತೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಎನ್.ಆರ್.ರಮೇಶ್,ತೇಜಸ್ವಿನಿ ಅನಂತ ಕುಮಾರ್,ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಹಸ್ರಾರು ಕೃಷ್ಣ ಭಕ್ತರಿಂದ ಸಮಗ್ರ ಕೋಟಿಗೀತಾ ಲೇಖನಯಜ್ಞ ದೀಕ್ಷೆ ನೆರವೇರಿತು. ವಿಷ್ಣಸಹಸ್ರನಾಮ ಪಾರಾಯಣ, ನಾಡಿನ ಪ್ರಸಿದ್ಧ ಚಿಂತಕರು, ಉಪನ್ಯಾಸಕರಿಂದ ದೀತಾ-ಚಿಂತನ, ಭಗವದ್ಗೀತಾ ಕಲಾ ಪ್ರಾಕಾರಗಳ ಪ್ರಸ್ತುತಿ, ಶಾಲೆಯ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಸಂಬಂಧಿತ ಸ್ಪರ್ಧೆ, ಭಗವದ್ಗೀತೆಗೆ ಸಂಬಂಧಪಟ್ಟ ವಿವಿಧ ಚಿಂತನೆಗಳ ಸಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ ನೆರವೇರಿತು.
ಸಂಜೆ “ಆಚಾರ್ಯತ್ರಯರ ಚಿಂತನೆಯಲ್ಲಿ-ಭಗವದ್ಗೀತೆ’ ಕಾರ್ಯಕ್ರಮ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಾಧಿಪತಿ ಪ್ರೊ| ಶ್ರೀನಿವಾಸ ವರಖೇಡಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.
“ಆಚಾರ್ಯ ಶಂಕರರ ಗೀತಾಚಿಂತನೆ’ ಬಗ್ಗೆ ಮೈಸೂರಿನ ಶ್ರೀಸುಧಾಮ ಸಂಸ್ಕೃತ ದಿನಪತ್ರಿಕೆಯ ಸಂಪಾದಕ ವಿ| ಎಚ್.ವಿ. ನಾಗರಾಜ ರಾವ್, “ಆಚಾರ್ಯ ರಾಮಾನುಜರ ಗೀತಾಚಿಂತನೆ’ ಬಗ್ಗೆ ಪರಾಂಕುಶಾಚಾರ್ಯ ವೈದಿಕ ಅಧ್ಯಯನ ಸಂಸ್ಥೆಯ ಸ್ಥಾಪಕನ್ಯಾಸಿ ಡಾ| ರಾಮಾನುಜನ್ ಸಿ. ಡ್ಯಾಕ್, “ಆಚಾರ್ಯ ಮಧ್ವರ ಗೀತಾಚಿಂತನೆ’ ಬಗ್ಗೆ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲ ವಿ| ವಿ. ಹರಿದಾಸ್ ಭಟ್ಟ ಅವರು ಚಿಂತನೆ ನಡೆಯಿತು. ಡಾ|ಬಿ.ಗೋಪಾಲಾಚಾರ್ಯ ನಿರೂಪಿಸಿದರು,ಮಹಿತೋಷ್ ಆಚಾರ್ಯ ಸ್ವಾಗತಿಸಿದರು,ಶ್ರೀಪಾದರ ಆಪ್ತ ಕಾರ್ಯದರ್ಶಿ ಎಂ.ಪ್ರಸನ್ನಾಚಾರ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.