ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಸಾರಾ ಹರೀಶ್
ಸಾರಾ ಹರೀಶ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಮಂಜು ಮಾಂಡವ್ಯ ನಿರ್ದೆಶನದ `ಶ್ರೀ ಭರತ ಬಾಹುಬಲಿ’ ಚಿತ್ರದಲ್ಲಿ ನಟಿಸಿದ್ದಾರೆ.
ಮಾಡೆಲಿಂಗ್ ಕ್ಷೇತ್ರದಿಂದ ನಟನಾ ಕ್ಷೇತ್ರಕ್ಕೆ ಬಂದ ಸಾರಾ ಹರೀಶ್ ಶ್ರೀ ಭರತ ಬಾಹುಬಲಿ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸಿದ್ದಾರೆ. ಅವರು ತಮ್ಮ 17 ನೇ ವಯಸ್ಸಿನಲ್ಲಿ ಮಾಡೆಲಿಂಗ್ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಬಿಲ್ಬೋರ್ಡ್ ಮತ್ತು ಟಿವಿ ಜಾಹೀರಾತುಗಳಲ್ಲಿ ಜನಪ್ರಿಯರಾಗಿದ್ದರು.