ಮಂಗಳೂರು ವಿಮಾನ ದುರಂತಕ್ಕೆ ಹತ್ತು ವರ್ಷ: ಚಿತ್ರನೋಟ
2010ರ ಮೇ 22ರ ಮುಂಜಾನೆ ಏರ್ ಇಂಡಿಯಾ ವಿಮಾನ ರನ್ ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಶುಕ್ರವಾರಕ್ಕೆ 10 ವರ್ಷ ಪೂರ್ಣವಾಗುತ್ತದೆ. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದೊಂದು ಮರೆಯಲಾಗದ ದುರಂತ. ದುರಂತದಲ್ಲಿ ಪೈಲಟ್, ಸಿಬ್ಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ಆ ವಿಮಾನದಲ್ಲಿ ಒಟ್ಟು 135 ಮಂದಿ ವಯಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬ್ಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. 8 ಮಂದಿ ಬದುಕುಳಿದಿದ್ದರು. ಮೃತಪಟ್ಟವ ರಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೇರಳದವರಿದ್ದರು.
ಚಿತ್ರ ಕೃಪೆ: Sathish Ira