ಹಿಂಸಾಚಾರದ ವಿರುದ್ಧ ನಾಳೆ ರಾಜ್ ಘಾಟ್ ನಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ : ಘೋಷ್

ಮುಂಗಾರು ಅಧಿವೇಶನದಲ್ಲಿರುವ ಪಶ್ಚಿಮ ಬಂಗಾಳದ ಬಿಜೆಪಿ ಸಂಸದರು ಪ್ರತಿಭಟನೆಯಲ್ಲಿ ಭಾಗಿ : ಘೋಷ್

Team Udayavani, Jul 21, 2021, 11:37 AM IST

Bengal BJP leaders to protest at Delhi’s Rajghat tomorrow

ನವ ದೆಹಲಿ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ವಿರುದ್ಧವಾಗಿ ರಾಷ್ಟ್ರ ರಾಜಧಾನಿ ನವ ದೆಹಲಿಯ ರಾಜ್ ಘಾಟ್ ನಲ್ಲಿ ನಾಳೆ (ಗುರುವಾರ, ಜುಲೈ 22) ಪ್ರತಿಭಟನೆ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆ ಎ ಎನ್ ಐ ನೊಂದಿಗೆ ಮಾತನಾಡಿದ ಘೋಷ್,  ಕಳೆದ ಏಳು ವರ್ಷಗಳಲ್ಲಿ 175 ಬಿಜೆಪಿ ಕಾರ್ಯಕರ್ತರು ಹಿಂಸಾಚಾರದಿಂದ ಮೃತಪಟ್ಟಿದ್ದಾರೆ. ಪಕ್ಷಕ್ಕಾಗಿ ಕಾರ್ಯ ನಿರ್ವಹಿಸಿದ ಕಾರ್ಯಕರ್ತರ ಸಾವಿಗೆ ಯಾವುದೇ ರೀತಿಯ ನ್ಯಾಯ ದೊರಕಿಲ್ಲ. ರಾಜ್ಯದಲ್ಲಿ ಹಿಂಸಾಚಾರ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಹಾಗಾಗಿ ರಾಜ್ಯ ಬಿಜೆಪಿ ಘಟಕ ರಾಷ್ಟ್ರ ರಾಜಧಾನಿಯ ರಾಜ್ ಘಾಟ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಮಾಹಿತ ನೀಡಿದ್ದಾರೆ.

ಇದನ್ನೂ ಓದಿ : CM ಸ್ಥಾನದಿಂದ ಬಿಎಸ್ವೈ ಪದಚ್ಯುತಿ ಮಾಡಿದರೆ ಬಿಜೆಪಿ ತಕ್ಕ ಶಾಸ್ತಿ ಅನುಭವಿಸಲಿದೆ:ಮನಗೂಳಿಶ್ರೀ

ಮೂರು ವರ್ಷಗಳ ಹಿಂದೆ ರಾಜ್ ಘಾಟ್ ನಲ್ಲಿ ಇಂತದ್ದೇ ಪ್ರತಿಭಟನೆಯನ್ನು ಪಕ್ಷ ಆಯೋಜಿಸಿತ್ತು. ಈಗ ಮತ್ತೆ ಹಿಂಸಾಚಾರದ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಮುಂಗಾರು ಅಧಿವೇಶನದಲ್ಲಿ ಇರುವ ಪಶ್ಚಿಮ ಬಂಗಾಳದ ಬಿಜೆಪಿ ಸಂಸದರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಪೆಗಾಸಸ್ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಸೇರಿ ವಿರುದ್ಧ ಪಕ್ಷಗಳು ಪೆಗಾಸಸ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯನ್ನು ಆರೋಪಿಸುತ್ತಿವೆ. ಅವರ ಆರೋಪಗಳು ಆಧಾರ ರಹಿತವಾಗಿದೆ ಎಂದು ಜನರಿಗೆ ಗೊತ್ತಿದೆ. ಪ್ರಚಾರದಲ್ಲಿ ಇರಬೇಕು ಎಂಬ ದೃಷ್ಟಿಯಿಂದ ಮಾತ್ರ ಬಿಜೆಪಿ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ದೆಹಲಿ ಭೇಟಿಯ ಬಗ್ಗೆ ಸುದ್ದಿ ಸಂಸ್ಥೆ ಎಎನ್ ಐ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2019 ರ ಲೋಕಸಭೆಯ ಮೊದಲು ಅವರು ಕೋಲ್ಕತ್ತಾದ ಎಲ್ಲಾ ಪಕ್ಷಗಳನ್ನು ಕರೆದು ದೊಡ್ಡ ಪ್ರತಿಭಟನೆ ನಡೆಸಿದರು. ಫಲಿತಾಂಶವೇನಾಯಿತು ? ಲೋಕಸಭಾ ಚುನಾವಣೆಯಲ್ಲಿ ಅವರು ತಮ್ಮ 12 ಸ್ಥಾನಗಳನ್ನು ಕಳೆದುಕೊಂಡರು. ಅವರ ಪಕ್ಷವು ಪತನದ ಹಾದಿಯಲ್ಲಿದೆ. ಅವರು ಪ್ರಧಾನಿಯಾಗಬೇಕು ಮತ್ತು ದೇಶವನ್ನು ಮುನ್ನಡೆಸಬೇಕು ಎಂದು ಕನಸು ಕಂಡಿದ್ದರು. ಅದು ಆಗಲಿಲ್ಲ. ತ್ರಿಪುರ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿಯೂ ಅಸ್ತಿತ್ವ ಕುಗ್ಗುತ್ತಿದೆ. ರಾಜ್ಯದಲ್ಲಿ ಮತ್ತೆ ಮಮತಾ ಬ್ಯಾನರ್ಜಿ ಸರ್ಕಾರವು ತನ್ನ ಆಡಳಿತದಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಬಂಗಾಳದಲ್ಲಿ ಹಿಂಸಾಚಾರ ಮತ್ತು ಭ್ರಷ್ಟಾಚಾರಗಳು ವಿಪರೀತವಾಗಿವೆ. ರಾಜ್ಯ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಅವರು ದೆಹಲಿಗೆ ಬರುತ್ತಿದ್ದಾರೆ. ಬರಲಿ ಮಾಧ್ಯಮಗಳ ಪ್ರಚಾರವನ್ನು ಪಡೆದುಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್:ಬಿಜೆಪಿಯ ಅಭಿವೃದ‍್ದಿ ಯೋಜನೆಗಳನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲಾಗುತ್ತಿಲ್ಲ: ಧಾಮಿ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.