ಏನಿದು ಬಿಜೆಪಿ ಚಿಂತನಾ ಸಭೆಯ ಹಕೀಕತ್?
ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ವರ್ಷ ಪೂರೈಸುವ ಹೊಸ್ತಿಲಲ್ಲೇ..
Team Udayavani, Jul 14, 2022, 3:42 PM IST
ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ವರ್ಷ ಪೂರೈಸುವ ಹೊಸ್ತಿಲಲ್ಲೇ ಬಿಜೆಪಿ ಆಯೋಜಿಸಿರುವ ಚಿಂತನಾ ಸಭೆ ಈಗ ತೀವ್ರ ಕುತೂಹಲ ಸೃಷ್ಟಿಸಿದೆ.
ಬೆಂಗಳೂರು ಹೊರ ವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನಾಸಭೆ ನಡೆಯಲಿದೆ. ಜುಲೈ 15, 16 ರಂದು ಈ ಸಭೆ ನಡೆಯಲಿದ್ದು, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಲಿದ್ದಾರೆ.
ವಿಶೇಷವೆಂದರೆ ಈ ಸಭೆಯ ವಿಚಾರದಲ್ಲಿ ಪಕ್ಷದ ಎಲ್ಲ ಅಧಿಕೃತ ವೇದಿಕೆಗಳು ಮಗುಮ್ಮಾಗಿವೆ. ಮಾಧ್ಯಮಗಳಿಗೆ ಆಹ್ವಾನವಿಲ್ಲದಿರುವುದರ ಜತೆಗೆ ಸಭೆಯ ಸ್ವರೂಪದ ಬಗ್ಗೆಯೂ ಸ್ಪಷ್ಟತೆ ಇಲ್ಲ.
ಚುನಾವಣಾ ವರ್ಷದಲ್ಲಿ ಸಚಿವರ ಮೌಲ್ಯಮಾಪನ ಮಾಡುವುದಕ್ಕೆ ಈ ಸಭೆ ವೇದಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.ಇದರ ಜತೆಗೆ ಮೂಲ ಬಿಜೆಪಿ ಸಚಿವರ ಜತೆಗೆ ಪ್ರತ್ಯೇಕ ಸಭೆ ಹಾಗೂ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸರಕಾರಕ್ಕೆ ಇನ್ನಷ್ಟು ವೇಗೋತ್ಕರ್ಷ ನೀಡುವುದಕ್ಕಾಗಿ ಚಿಂತನಾ ಬೈಠಕ್ ಕರೆಯಲಾಗಿದೆ ಎಂದೂ ಬಿಜೆಪಿ ಮೂಲಗಳು ಹೇಳುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Maharashtra Poll: ವಿಪಕ್ಷಗಳ ದೂರವಾಣಿ ಕದ್ದಾಲಿಕೆ-ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ!
Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!
Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.