BJP ರಾಜಕೀಯ ಲೆಕ್ಕಾಚಾರ: ಈ ಕಾರಣಕ್ಕಾಗಿಯೇ ಬಿಜೆಪಿಗೆ ಮರಳಿದರೆ ಶೆಟ್ಟರ್?

ಹುಬ್ಬಳ್ಳಿ-ಬೆಳಗಾವಿಯ ನಂಟು.. ಮಾತೃ ಪಕ್ಷಕ್ಕೆ ಮರಳಲು ಬಲವಾದ ಕಾರಣವುಂಟು!

Team Udayavani, Jan 25, 2024, 6:38 PM IST

1-aaaa

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದ್ದ ಕರ್ನಾಟಕ ಬಿಜೆಪಿ, ಲೋಕಸಭಾ ಚುನಾವಣೆಗಾಗಿ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೂಂಡು ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಮಹತ್ವದ ಬೆಳವಣಿಗೆಯಲ್ಲಿ ಒಂದು. ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಮಾತೃ ಪಕ್ಷಕ್ಕೆ ಮರಳಲು ರಾಜಕೀಯ ವಿಶ್ಲೇಷಕರು ಬಲವಾದ ಕಾರಣವೊಂದನ್ನು ಕಂಡುಕೊಂಡಿದ್ದಾರೆ.

ಬಿಜೆಪಿ ಈಗಾಗಲೇ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಿಸಿದ್ದು, ನಾಯಕರು ಗೆಲ್ಲುವ ಸಾಮರ್ಥ್ಯ ಇರುವವರಿಗೇ ಟಿಕೆಟ್ ನೀಡುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿಯೇ ಹೈವೋಲ್ಟೇಜ್ ಹಣಾಹಣಿಗೆ ಸಾಕ್ಷಿಯಾಗಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಮಲ ಪಾಳಯದ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ತೀವ್ರವಾಗಿದೆ.

2004 ರಿಂದ ನಿರಂತರ ನಾಲ್ಕು ಬಾರಿ ಸುರೇಶ್ ಅಂಗಡಿ ಅವರು ಸಂಸದರಾಗಿ ಆಯ್ಕೆಯಾಗಿದ್ದರು. ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ 2021 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪ್ರಬಲ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರು ಅನುಕಂಪದ ಆಧಾರದಲ್ಲಿ 5,240 ಮತಗಳ ಅಂತರದ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಬಾರಿ ಮಂಗಳಾ ಅಂಗಡಿ ಅವರ ಬದಲಾಗಿ ಟಿಕೆಟ್ ಯುವ ಮುಖಕ್ಕೆ ನೀಡಲು ಬಿಜೆಪಿ ತೀರ್ಮಾನ ಮಾಡಿರುವ ಕುರಿತು ಚರ್ಚೆಗಳು ನಡೆದಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದ ಸುರೇಶ್ ಅಂಗಡಿ ಅವರ ಪುತ್ರಿ, ಜಗದೀಶ ಶೆಟ್ಟರ್‌ ಸೊಸೆ ಶ್ರದ್ಧಾ ಶೆಟ್ಟರ್‌ ಅವರನ್ನು ಬಿಜೆಪಿ ಕಣಕ್ಕಿಳಿಸುವ ಎಲ್ಲಾ ಸಾಧ್ಯತೆಗಳಿವೆ.

ಸೊಸೆ ಬಿಜೆಪಿ ಅಭ್ಯರ್ಥಿಯಾಗಿ, ಮಾವ ಕಾಂಗ್ರೆಸ್ ಪಕ್ಷದಲ್ಲಿದ್ದರೆ ಪ್ರಚಾರದ ವೇಳೆ ಮುಜುಗರ ಅನುಭವಿಸಬೇಕಾಗಬಹುದು ಎಂದು ಚುನಾವಣೆ ಘೋಷಣೆಗೆ ಮೊದಲು ಶೆಟ್ಟರ್ ಅವರು ಕಮಲ ಪಾಳಯಕ್ಕೆ ಮರಳಿ ಪುನರ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ದಿಢೀರ್ ದೆಹಲಿ ಮಟ್ಟದಲ್ಲಿ ಶೆಟ್ಟರ್ ಅವರು ಪಕ್ಷಕ್ಕೆ ಮರಳಲು ಇದು ಪ್ರಮುಖ ಕಾರಣ ಎಂದು ಹಲವು ಆಯಾಮಗಳಲ್ಲಿ ಅಂದಾಜಿಸಲಾಗಿದೆ.

ಶೆಟ್ಟರ್ ಪುತ್ರ, ಶ್ರದ್ಧಾ ಪತಿ ಸಂಕಲ್ಪ್ ಅವರು ತಂದೆ ಪಕ್ಷಕ್ಕೆ ಮರಳಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ನಮ್ಮ ಕುಟುಂಬ ಜನಸಂಘದ ಕಾಲದಿಂದ ಸಂಘಟನೆ ಮಾಡಿಕೊಂಡು ಬಂದಿದೆ. ಮೋದಿ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದರು.ಈ ವೇಳೆ ಸಂಸದೆ ಮಂಗಳಾ ಅಂಗಡಿ ಅವರೂ ಜತೆಯಲ್ಲಿದ್ದರು.

ಸುರೇಶ್ ಅಂಗಡಿ ನಿಧನದ ನಂತರ ಬೆಳಗಾವಿ ಲೋಕಸಭೆ ಉಪ ಚುನಾವಣೆ ವೇಳೆ ಸೊಸೆ ಶ್ರದ್ಧಾಗೆ ಟಿಕೆಟ್‌ ಕೊಡಿಸಲು ಜಗದೀಶ ಶೆಟ್ಟರ್‌ ಅವರು ದೆಹಲಿ ಸೇರಿದಂತೆ ರಾಜ್ಯಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದ ಶ್ರದ್ಧಾ ಸದ್ದಿಲ್ಲದೇ ಬಿಜೆಪಿ ಶಾಸಕರು, ಮುಖಂಡರನ್ನು ಭೇಟಿ ಮಾಡಿದ್ದರು. ತಾಯಿಗೆ ಟಿಕೆಟ್ ಸಿಕ್ಕಿದ ಬಳಿಕ ಕ್ಷೇತ್ರದೆಲ್ಲೆಡೆ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದರು. ಲಿಂಗಾಯತ ಕೋಟಾ, ಮಹಿಳಾ ಮತ್ತು ಯುವ ಕೋಟಾ ಲೆಕ್ಕಾಚಾರದ ಅಡಿಯಲ್ಲಿ ಶ್ರದ್ಧಾ ಬಿಜೆಪಿ ಟಿಕೆಟ್ ಪಡೆದರೆ ಅಚ್ಚರಿಯಿಲ್ಲ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.