ಮಂಡ್ಯದಲ್ಲಿ ಹೊಸ ಲೆಕ್ಕಾಚಾರ: ಬಿಜೆಪಿ ಸೇರಿದ ಡಾ.ಲಕ್ಷ್ಮೀ ಅಶ್ವಿನ್ ಗೌಡ
ನನ್ನ ತ್ಯಾಗಕ್ಕೆ ಸರಿಯಾದ ಅವಕಾಶ ಸಿಗಲಿಲ್ಲ: ತೆನೆ ಇಳಿಸಿದ ಡಾಕ್ಟರ್
Team Udayavani, May 7, 2022, 9:06 PM IST
ಬೆಂಗಳೂರು: ಜೆಡಿಎಸ್ ಸೇರಿ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಆಂತರಿಕ ಕಂದಾಯ ಸೇವೆಯ ಹುದ್ದೆಗೆ ರಾಜೀನಾಮೆ ನೀಡಿದ್ದ ಡಾ. ಲಕ್ಷ್ಮೀ ಅಶ್ವಿನ್ ಗೌಡ ಅವರು ಶನಿವಾರ ಬಿಜೆಪಿ ಸೇರಿದ್ದಾರೆ.
ಎಂಬಿಬಿಎಸ್ ಮುಗಿಸಿ ಅಧಿಕಾರಿಯಾಗಿರುವ ಲಕ್ಷ್ಮೀ ಅವರ ಮೇಲೆ ಬಿಜೆಪಿ ಹೊಸ ಭರವಸೆ ಇಟ್ಟಿದ್ದು, ಮಂಡ್ಯದಲ್ಲಿ ಪಕ್ಷವನ್ನು ಬಲಪಡಿಸಿಕೊಳ್ಳಲು ಹೊಸ ಲೆಕ್ಕಾಚಾರ ಹಾಕಿಕೊಂಡಿದೆ. ಒಂದೆಡೆ ಅಂಬರೀಷ್ ಅವರ ಅಲೆಯನ್ನು ಬಳಸಿಕೊಳ್ಳಲು ಮುಂದಾಗಿರುವ ಕಮಲ ಪಾಳಯ, ಪಕ್ಷೇತರ ಸಂಸದೆ ಸುಮಲತಾ ಅವರನ್ನು ಮತ್ತು ಪುತ್ರ ಅಭಿಷೇಕ್ ಅವರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ.
ಐಆರ್ ಎ ಎಸ್ ಮಾಡಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಜನಸೇವೆಯನ್ನು ಆಯ್ಕೆ ಮಾಡಿಕೊಂಡೆ. ಆದರೆ ನನ್ನ ತ್ಯಾಗಕ್ಕೆ ಸರಿಯಾದ ಅವಕಾಶ ಸಿಗಲಿಲ್ಲ. ಮಂಡ್ಯ ಜಿಲ್ಲೆಯನ್ನು ದೇಶದಲ್ಲೇ ಮಾದರಿ ಜಿಲ್ಲೆಯನ್ನಾಗಿಸಬೇಕು, ಇಲ್ಲಿನ ಬಡವರ, ಮಹಿಳೆಯರ, ಶೋಷಿತರ ಧ್ವನಿಯಾಗಿ ಕೆಲಸ ಮಾಡಬೇಕು ಅನ್ನುವ ಉದ್ದೇಶದಿಂದ ಬಿಜೆಪಿ ಪಕ್ಷವನ್ನು ಸೇರುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರಲಿ ಎಂದು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಜನಿ ಫೌಂಡೇಶನ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಲಕ್ಷ್ಮೀ ಅವರು ಚುನಾವಣೆಗೂ ಮುನ್ನ ಇನ್ನಷ್ಟು ಬಿರುಸಿನ ರಾಜಕೀಯ ಚಟುವಟಿಕೆ ನಡೆಸುವ ಸಾಧ್ಯತೆಗಳಿವೆ.
ಲಕ್ಷ್ಮೀ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಪ್ರಭಾವವಿರುವ ಮದ್ದೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಒಂದೊಮ್ಮೆ ಅಭಿಷೇಕ್ ಅವರು ಬಿಜೆಪಿಗೆ ಬಂದಲ್ಲಿ ಅವರೂ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದಲ್ಲಿ ಲೆಕ್ಕಾಚಾರಗಳು ಬದಲಾಗ ಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.