ಗ್ರಾ. ಪಂ. ಚುನಾವಣೆ: ಗೋವಾ ಸರ್ಕಾರದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಚುನಾವಣೆ ನಿಗದಿಯಂತೆಯೇ ನಡೆಯಲಿದೆ; ಸರಕಾರಕ್ಕೆ ಮುಖಭಂಗ
Team Udayavani, Jul 6, 2022, 3:12 PM IST
ಪಣಜಿ: ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮುಂಬಯಿ ಉಚ್ಛ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಗೋವಾ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ಪಂಚಾಯತ್ ಚುನಾವಣೆ ನಿಗದಿಯಂತೆಯೇ ಆಗಸ್ಟ್ 10 ರಂದು ನಡೆಯಲಿದೆ.
ಮುಂಬಯಿ ಉಚ್ಛ ಬ್ಯಾಯಾಲಯದ ಗೋವಾ ಪೀಠವು ಆಗಸ್ಟ್ 12 ಕ್ಕೂ ಮುನ್ನ ಗೋವಾದಲ್ಲಿ ಪಂಚಾಯತ ಚುನಾವಣೆಯನ್ನು ನಡೆಸುವಂತೆ ಗೋವಾ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಾಗೂ ಪಂಚಾಯತ್ ಚುನಾವಣೆಯನ್ನು ಮುಂದೂಡುವಂತೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಸುಪ್ರಿಂ ಕೋರ್ಟ್ ಗೋವಾ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿರುವುದರಿಂದ ನಿಗದಿಯಂತೆಯೇ ಚುನಾವಣೆ ನಡೆಯಲಿದ್ದು ಆಗಸ್ಟ್ 12 ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.