Lok Sabha Election ಬಳಿಕವೂ ಬಿಜೆಪಿ ಸಖ್ಯಕ್ಕೆ ದಳ ಆಸಕ್ತಿ
ವಿಧಾನಪರಿಷತ್‌ನ 7ರ ಪೈಕಿ ಮೂರರ ಮೇಲೆ ಜೆಡಿಎಸ್ ಕಣ್ಣು
Team Udayavani, Nov 4, 2023, 6:35 AM IST
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕವೂ ಬಿಜೆಪಿ ಜತೆಗೆ ಮೈತ್ರಿ ಮುಂದುವರಿಕೆಗೆ ಜೆಡಿಎಸ್ ಉತ್ಸಾಹ ತೋರುತ್ತಿದ್ದು, 2024ರ ಜೂನ್ ತಿಂಗಳಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲೂ ಸಖ್ಯ ವಿಸ್ತರಣೆಗೆ ಪ್ರಸ್ತಾವಿಸಲು ನಿರ್ಧರಿಸಿದೆ.
ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಒತ್ತಡ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರಿಗೆ ಈ ಸಂದೇಶ ರವಾನಿಸಲು ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಗೋವಾ ಸಿಎಂ ಪ್ರಮೋದ್ ಸಾವಂತ್ ಜತೆಗೆ ಸದ್ಯದಲ್ಲೇ ಈ ವಿಷಯವನ್ನು ಪ್ರಸ್ತಾವಿಸಲಿದ್ದಾರೆ. ಆದರೆ ಬಿಜೆಪಿ ಮೂಲಗಳ ಪ್ರಕಾರ, ಜೆಡಿಎಸ್‌ನ ಕೆಲವು ಪ್ರಭಾವಿಗಳ ಹಿತಾಸಕ್ತಿ ಕಾಪಾಡುವುದಕ್ಕಾಗಿ ಕುಮಾರ ಸ್ವಾಮಿ ಈ ದಾಳ ಉರುಳಿಸಿದ್ದಾರೆ. ವಿಧಾನ ಪರಿಷತ್ತಿನ ಮೂರು ಸ್ಥಾನಗಳ ಮೇಲೆ ಕಣ್ಣಿಟ್ಟು ಲೋಕಸಭಾ ಚುನಾವಣೆ ಬಳಿಕವೂ ಮೈತ್ರಿ ವಿಸ್ತರಣೆಗೆ ಅವರುಸಿದ್ಧರಾಗಿದ್ದಾರೆ ಎನ್ನಲಾಗುತ್ತಿದೆ.
ಭಿನ್ನಮತದ ಲಕ್ಷಣ
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕ, ನೈಋತ್ಯ ಶಿಕ್ಷಕ, ಬೆಂಗಳೂರು ಶಿಕ್ಷಕ ಹಾಗೂ ದಕ್ಷಿಣ ಶಿಕ್ಷಕ ಕ್ಷೇತ್ರಕ್ಕೆ ಮುಂದಿನ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಪೈಕಿ ಬೆಂಗಳೂರು ಶಿಕ್ಷಕ, ನೈಋತ್ಯ ಶಿಕ್ಷಕ ಹಾಗೂ ದಕ್ಷಿಣ ಶಿಕ್ಷಕ ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಜೆಡಿಎಸ್ ಬಿಜೆಪಿ ವರಿಷ್ಠರಿಗೆ ಮನವಿ ಮಾಡಲು ನಿರ್ಧರಿಸಿದೆ. ಆದರೆ ನೈಋತ್ಯ ಶಿಕ್ಷಕ ಕ್ಷೇತ್ರ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಭಿನ್ನಮತ ತಲೆದೋರುವ ಲಕ್ಷಣಗಳು ಸೃಷ್ಟಿಯಾಗಿದ್ದು, ಉಳಿದೆರಡು ಕ್ಷೇತ್ರ ತ್ಯಾಗದಲ್ಲಿ ಅಂಥ ಭಿನ್ನಧ್ವನಿ ಇಲ್ಲ ಎಂಬ ಮಾತು ಬಿಜೆಪಿಯಿಂದ ಕೇಳಿ ಬಂದಿದೆ.
ನೈಋತ್ಯ ಶಿಕ್ಷಕ ಕ್ಷೇತ್ರವನ್ನು ಜೆಡಿಎಸ್‌ನ ಭೋಜೇಗೌಡ ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿಯ ಗಣೇಶ್ ಕಾರ್ಣಿಕ್ ಇಲ್ಲಿ ಸೋತಿದ್ದರು. ಈ ಬಾರಿಯೂ ಅವರು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಭೋಜೇ ಗೌಡರ ನಡುವಿನ ಭಿನ್ನಾಭಿಪ್ರಾಯ ಈ ಮೈತ್ರಿಗೆ ಧಕ್ಕೆ ತರಬಹುದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿ.ಟಿ.ರವಿಯನ್ನು ಸೋಲಿಸುವಂತೆ ಭೋಜೇಗೌಡ ಬಹಿರಂಗ ಪ್ರಚಾರ ನಡೆಸಿದ್ದರು. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯ ಒಕ್ಕಲಿಗ ಸಮೀಕರಣ ಇದಕ್ಕೆ ಅವಕಾಶ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಭೋಜೇಗೌಡ ಕುಮಾರಸ್ವಾಮಿಗೆ ಅತ್ಯಾಪ್ತರಾದರೆ, ಗಣೇಶ್ ಕಾರ್ಣಿಕ್ ಯಡಿಯೂರಪ್ಪ ಸಹಿತ ಬಿಜೆಪಿಯ ಹಿರಿಯರಿಗೆ ಆತ್ಮೀಯರು. ಹೀಗಾಗಿ ನೈಋತ್ಯ ಶಿಕ್ಷಕ ಕ್ಷೇತ್ರ ಬಿಜೆಪಿ-ಜೆಡಿಎಸ್ ಮಧ್ಯೆ ಉತ್ತರ-ದಕ್ಷಿಣ ವಾತಾವರಣ ಸೃಷ್ಟಿಸಬಹುದು ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಇಲ್ಲಿ ಇನ್ನೊಂದು ತಾಂತ್ರಿಕ ಅಡಚಣೆಯೂ ಇದೆ. ಸಾಮಾನ್ಯವಾಗಿ ಆಗ್ನೇಯ ಶಿಕ್ಷಕ ಹಾಗೂ ಆಗ್ನೇಯ ಪದವೀಧರ ಕ್ಷೇತ್ರವನ್ನು ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಎಂಬ ಲೆಕ್ಕಾಚಾರದಲ್ಲಿ ವಿಭಜಿಸಿ ಎರಡರ ಪೈಕಿ ಒಂದನ್ನು ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದವರಿಗೆ, ಇನ್ನೊಂದನ್ನು ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲೆಗೆ ಬಿಟ್ಟುಕೊಡಲಾಗುತ್ತಿತ್ತು. ಕಳೆದ ಬಾರಿ ನೈಋತ್ಯ ಪದವೀಧರ ಕ್ಷೇತ್ರವನ್ನು ಆಯನೂರು ಮಂಜುನಾಥ್‌ಗೆ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಕಾರ್ಣಿಕ್‌ಗೆ ನೀಡಲಾಗಿತ್ತು.
ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆಗ್ನೇಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆಗೆ ಉತ್ಸುಕರಾಗಿದ್ದಾರೆ. ನೋಂದಣಿ ಕಾರ್ಯವನ್ನೂ ಆರಂಭಿಸಿದ್ದಾರೆ. ವಿನಾಕಾರಣ ರಘುಪತಿ ಭಟ್ಟರಿಗೆ ಟಿಕೆಟ್ ತಪ್ಪಿಸಲಾಯಿತೆಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ನಾಯಕರೂ ಹೇಳುತ್ತಿದ್ದಾರೆ. ಹೀಗಾಗಿ ತಕ್ಕಡಿ ಅತ್ತ ವಾಲಿದರೆ ಗಣೇಶ್ ಕಾರ್ಣಿಕ್ ಕಣದಿಂದ ಹೊರಬೀಳುವ ಸಾಧ್ಯತೆ ಇದೆ. ಈ ಸಮೀಕರಣವನ್ನು ಮನಗಂಡಿರುವ ಸಿ.ಟಿ.ರವಿ ಶಿವಮೊಗ್ಗ ಮೂಲದ ಲಿಂಗಾಯತರೊಬ್ಬರನ್ನು ಅಖಾಡಕ್ಕೆ ಇಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕುತೂಹಲ ಸೃಷ್ಟಿಸಿದ ಬೆಂಗಳೂರು
ಇದೆಲ್ಲದರ ಮಧ್ಯೆ ಬೆಂಗಳೂರು ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ವಿಚಾರ ತೀವ್ರ ಕುತೂಹಲ ಸೃಷ್ಟಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಇಳಿಯಲಿರುವ ಪುಟ್ಟಣ್ಣ ಅವರನ್ನು ಸೋಲಿಸಲು ಬೆಂಗಳೂರು ಶಿಕ್ಷಕ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಸಿದ್ಧವಾಗಿದೆ. ಕಳೆದ ಬಾರಿ ಕೇವಲ 900 ಮತಗಳಿಂದ ಸೋತಿದ್ದ ನ್ಯಾಯವಾದಿ ಎ.ಪಿ.ರಂಗನಾಥ್ ಮತ್ತೆ ಕಣಕ್ಕೆ ಇಳಿಯುವುದು ಬಹುತೇಕ ಖಾತ್ರಿಯಾಗಿದೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ. ಹಾಲಿ ಸದಸ್ಯ ಅ.ದೇವೇಗೌಡ ಬದಲು ಯುವ ಮುಖಕ್ಕೆ ಈ ಬಾರಿ ಅವಕಾಶ ನೀಡಲು ಬಿಜೆಪಿ ಚಿಂತನೆ ನಡೆಸಿದ್ದು, ಬಿಜೆಪಿ ಸಾಮಾಜಿಕ ಜಾಲ ಪ್ರಕೋಷ್ಠದ ಮಾಜಿ ಸಂಚಾಲಕ, ಯುವ ಮೋರ್ಚಾ ಮಾಜಿ ಕಾರ್ಯದರ್ಶಿ ವಿನೋದ್ ಕೆ.ಗೌಡ ನೋಂದಣಿ ಕಾರ್ಯ ನಡೆಸುತ್ತಿದ್ದಾರೆ. ಎ.ಎಚ್. ಆನಂದ ಕೂಡ ಆಕಾಂಕ್ಷಿಯಾಗಿದ್ದಾರೆ.
*ರಾಘವೇಂದ್ರ ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
Kerala:ಧರ್ಮ ಆಧಾರಿತ ವಾಟ್ಸಾಪ್ ಗ್ರೂಪ್ ರಚನೆ ಆರೋಪ; ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು
MUST WATCH
ಹೊಸ ಸೇರ್ಪಡೆ
Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.