ಎಚ್.ಡಿ.ರೇವಣ್ಣ ಕಟ್ಟಾ ಅಭಿಮಾನಿ ಬಿಜೆಪಿ ಸೇರ್ಪಡೆ
ಧಮಕಿ ಹಾಕಿ ಬಾಯಿ ಮುಚ್ಚಿಸುವಲ್ಲಿ ಮುಂದಾಗಿದ್ದು ಬಹುತೇಕ ಕಾರ್ಯಕರ್ತರ ಅನುಭವ ಇದೇ ಆಗಿದೆ.
Team Udayavani, Sep 1, 2021, 1:06 PM IST
ಹೊಳೆನರಸೀಪುರ: ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಜೆಡಿಎಸ್ ಮುಖಂಡ ಮಾಜಿ ಸಚಿವ ಹಾಗೂ ಶಾಸಕ ಎಚ್. ಡಿ.ರೇವಣ್ಣ ಅವರ ಕಟ್ಟ ಅಭಿಮಾನಿ, ಕೃಷಿ ಮಾರುಕಟ್ಟೆ ಮಾಜಿ ಉಪಾಧ್ಯಕ್ಷ ಎಂ.ಎನ್.ಸುರೇಶ್ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಮಾರಗೋಡನಹಳ್ಳಿ ಮಾಯಣ್ಣ, ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಮಳಲಿ ನಾರಾಯಣ್ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲೂಕಿನ ಹುಲಿವಾಲ ಗ್ರಾಮದ ತೋಟದ ಮನೆಯೊಂದರಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಪಕ್ಷಕ್ಕೆ ಸೇರ್ಪಡೆಗೊಂಡ ಸುರೇಶ್ ಅವರು ಮಾತನಾಡಿ ತಾವು 40 ವರ್ಷಗಳಿಂದ ಜೆಡಿಎಸ್ ನಿಷ್ಟಾವಂತ ಕಾರ್ಯಕರ್ತರಾಗಿ ದುಡಿದಿದ್ದು ಪಕ್ಷ ಸಂಘಟನೆಗೆ ಜೆಡಿಎಸ್ ಮುಖಂಡರು ಬಳಸಿಕೊಂಡು ಸ್ಥಾನಮಾನ ನೀಡುವಲ್ಲಿ ತಾರತಮ್ಯವೆಸಗಿರುವುದು ತನ್ನ ಬೇಸರ ತಂದಿದೆ. ಹೀಗಾಗಿ ಜೆಡಿಎಸ್ ತೊರೆದು ಬಿಜೆಪಿ ತತ್ವ ಸಿದ್ದಾಂತ ಒಪ್ಪಿ ಸೇರ್ಪಡೆ ಆಗುತ್ತಿರುವುದಾಗಿ ತಿಳಿಸಿದರು. ಅಲ್ಲದೇ, ತಮ್ಮೊಂದಿಗೆ ನೂರಾರು ಮಂದಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ
ಆಗುತ್ತಿರುವುದಾಗಿ ತಿಳಿಸಿದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಮಾಯಣ್ಣ ಮಾತನಾಡಿ, ಜೆಡಿಎಸ್ ಮುಖಂಡರು ಕಾರ್ಯಕರ್ತರನ್ನು ತಮ್ಮ ಏಳಿಗೆಗಾಗಿ ದುಡಿಸಿಕೊಂಡ ನಂತರ ದೂರ ಸರಿಸಿ ತಾರತಮ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸುವ ಕಾರ್ಯಕರ್ತನಿಗೆ ಧಮಕಿ ಹಾಕಿ ಬಾಯಿ ಮುಚ್ಚಿಸುವಲ್ಲಿ ಮುಂದಾಗಿದ್ದು ಬಹುತೇಕ ಕಾರ್ಯಕರ್ತರ ಅನುಭವ ಇದೇ ಆಗಿದೆ. ಇತ್ತೀಚಿಗೆ ಹಲವರು ಬಿಜೆಪಿಗೆ ಸೇರ್ಪಡೆ ಆಗುತ್ತಿರುವುದು ಶ್ಲಾಘನೀಯವೆಂದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಮಳಲಿ ನಾರಾಯಣ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ತಾಲೂಕು ಮಟ್ಟದ ಬಿಜೆಪಿ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.