ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ
ರೇವಣ್ಣ ಧರಣಿ ತಂತ್ರಕ್ಕೆ ಅಶ್ವತ್ಥನಾರಾಯಣ ಎದಿರೇಟು
Team Udayavani, Jan 18, 2022, 6:20 PM IST
ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕಬೇಕೆನ್ನುವುದೇ ಸರಕಾರದ ಸಂಕಲ್ಪವಾಗಿದೆ. ಈ ವಿಷಯದಲ್ಲಿ ವ್ಯವಸ್ಥೆಯ ಸುಧಾರಣೆಯ ಕಡೆಗೆ ಆದ್ಯತೆ ಕೊಡಬೇಕೇ ವಿನಾ ವೈಯಕ್ತಿಕ ಪ್ರತಿಷ್ಠೆಯಿಂದ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಇದಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಧರಣಿಗೆ ಮುಂದಾಗಿದ್ದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತ್ಯುತ್ತರ ಕೊಟ್ಟಿದ್ದಾರೆ.
ತಾವು ಪ್ರತಿನಿಧಿಸುತ್ತಿರುವ ಹೊಳೆನರಸೀಪುರದಲ್ಲಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮನೋವಿಜ್ಞಾನ ಮತ್ತು ಫುಡ್ & ನ್ಯೂಟ್ರಿಷನ್ ವಿಷಯಗಳಲ್ಲಿ ಎಂ.ಎಸ್ಸಿ ಪದವಿ ಆರಂಭಿಸಲು ಉನ್ನತ ಶಿಕ್ಷಣ ಸಚಿವರು ಅಡ್ಡಗಾಲು ಹಾಕುತ್ತಿದ್ದಾರೆಂದು ಆರೋಪಿಸಿ ರೇವಣ್ಣ ಅವರು ಮುಖ್ಯಮಂತ್ರಿಗಳ ಗೃಹಕಚೇರಿ ಎದುರು ಧರಣಿ ನಡೆಸಲು ಮಂಗಳವಾರ ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಸಚಿವರು ಮೇಲ್ಕಂಡಂತೆ ಮಾರುತ್ತರ ಕೊಟ್ಟರು.
ರಾಜ್ಯದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಇನ್ನೂ 8-10 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಒಂದು ಕಾಲೇಜೂ ಇಲ್ಲ. ಈಗಿರುವ ಕಾಲೇಜುಗಳಲ್ಲೇ ಮೂಲಸೌಲಭ್ಯ, ಪ್ರಯೋಗಾಲಯ ಮತ್ತು ಸಿಬ್ಬಂದಿ ಕೊರತೆ ತೀವ್ರವಾಗಿದೆ. ಮೂಲಸೌಲಭ್ಯ ಸುಧಾರಣೆಗೆ 3,000 ಕೋಟಿ ರೂ. ಅಗತ್ಯವಿದೆ. ಜತೆಗೆ, ಈಗಿರುವ ಸ್ನಾತಕೋತ್ತರ ಕೇಂದ್ರಗಳನ್ನೇ ಸುಧಾರಿಸಬೇಕಾದ ತುರ್ತಿದೆ. ಹೀಗಾಗಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎರಡು ವರ್ಷಗಳಿಂದ ಸ್ನಾತಕೋತ್ತರ ಕೋರ್ಸುಗಳನ್ನು ಆರಂಭಿಸಲು ಅನುಮತಿ ನೀಡುತ್ತಿಲ್ಲ. ಸ್ವತಃ ಸಚಿವರಾಗಿ ಅನುಭವವಿರುವ ರೇವಣ್ಣನವರಿಗೆ ಇದು ಗೊತ್ತಿಲ್ಲವೇ?’ ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.
ಹೊಳೆನರಸೀಪುರ ಕ್ಷೇತ್ರವೊಂದರಲ್ಲೇ 8 ಸರಕಾರಿ ಪ್ರಥಮ ದರ್ಜೆ, 6 ಸ್ನಾತಕೋತ್ತರ, 3 ಪಾಲಿಟೆಕ್ನಿಕ್, 1 ಸರಕಾರಿ ಎಂಜಿನಿಯರಿಂಗ್ ಮತ್ತು ಐದು ಐಟಿಐ ಕಾಲೇಜುಗಳಿವೆ. ಕಳೆದ ಐದು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳಿಗೆ 65.40 ಕೋಟಿ ರೂ. ಮತ್ತು ಸಾಧನ-ಸಲಕರಣೆಗಳ ಖರೀದಿಗೆ 93.26 ಲಕ್ಷ ರೂ.ಗಿಂತ ಹಣ ಕೊಡಲಾಗಿದೆ. ಇಲ್ಲಿನ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ 84 ಕೋಟಿ ರೂ. ಹಾಗೂ ಸಾಧನ-ಸಲಕರಣೆಗಳಿಗೆಂದು 1.80 ಕೋಟಿ ರೂ. ಕೊಡಲಾಗಿದೆ. ಅಂದಮೇಲೆ, ತಾರತಮ್ಯದ ಪ್ರಶ್ನೆ ಎಲ್ಲಿ ಬಂತು?’ ಎಂದು ಅವರು ಅಂಕಿಅಂಶಗಳ ಸಮೇತ ಉತ್ತರಿಸಿದರು.
ಸ್ನಾತಕೋತ್ತರ ಕೋರ್ಸುಗಳು ವಿಶ್ವವಿದ್ಯಾಲಯದ ಮಟ್ಟದಲ್ಲೇ ಇರುವುದು ಶೈಕ್ಷಣಿಕವಾಗಿ ಒಳ್ಳೆಯದು. ಪದವಿ ಮತ್ತು ಸ್ನಾತಕೋತ್ತರ ಪದವಿ ಮಟ್ಟಗಳಲ್ಲಿ ಒಬ್ಬರೇ ಬೋಧಕರಿದ್ದರೆ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತದೆ ಎನ್ನುವುದು ಅಧ್ಯಯನಗಳಿಂದ ದೃಢಪಟ್ಟಿದೆ ಎಂದು ಸಚಿವರು ಪ್ರತಿಪಾದಿಸಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 9 ಸಾವಿರ ತರಗತಿಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ಕ್ಲಾಸ್ ರೂಮುಗಳನ್ನಾಗಿ ಮಾಡಲಾಗಿದೆ. ಉಳಿದ 6,500 ಕೊಠಡಿಗಳನ್ನೂ ಸ್ಮಾರ್ಟ್ ಕ್ಲಾಸ್ ರೂಮ್ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ’ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.