Politics ; ಮೌಲ್ಯಾಧಾರಿತ ರಾಜಕಾರಣದ ರೂವಾರಿ ರಾಮಕೃಷ್ಣ ಹೆಗಡೆ

ಆ.29 ಮಾಜಿ ಮುಖ್ಯಮಂತ್ರಿ ದಿ|ರಾಮಕೃಷ್ಣ ಹೆಗಡೆಯವರ ಜನ್ಮದಿನ

Team Udayavani, Aug 28, 2023, 11:17 PM IST

1-qwwqew

ರಾಮಕೃಷ್ಣ ಹೆಗಡೆ ಅವರ ಮೌಲ್ಯಗಳು-ಚಿಂತನೆಗಳನ್ನು ಯುವ ಪೀಳಿಗೆಗೆ ತಿಳಿಸಲು ಅಧ್ಯಯನ ಪೀಠ ಸ್ಥಾಪನೆಯಾಗಬೇಕಿದೆ. ಇದಕ್ಕೆ ಸರಕಾರ ಇಚ್ಛಾಶಕ್ತಿ ತೋರಬೇಕು..

ದಿಕ್ಕು-ದೆಸೆಯಿಲ್ಲದ ಇಂದಿನ ರಾಜಕಾರಣವನ್ನು ಕಂಡಾಗ ಮೌಲ್ಯಾಧಾರಿತ ರಾಜಕಾರಣ ನಡೆಸಿದ ಮಾಜಿ ಮುಖ್ಯಮಂತ್ರಿ ದಿ|ರಾಮಕೃಷ್ಣ ಹೆಗಡೆ ಸದಾ ನೆನಪಾಗುತ್ತಾರೆ. ಸಿಎಂ ಆಗಿದ್ದಾಗ ಇಡೀ ದೇಶವೇ ಕರ್ನಾಟಕದ ಕಡೆ ನಿಬ್ಬೆರಗಾಗಿ ನೋಡುವಂತೆ ಸೊಗಸಾದ ಆಡಳಿತ ನಡೆಸಿದ ಮಹಾನ್‌ ನಾಯಕ. ರಾಜಕೀಯ ಜೀವನದುದ್ದಕ್ಕೂ ನಂಬಿದ ಹಾಗೂ ತಾವೇ ಪ್ರತಿಪಾದಿಸಿದ ರಾಜಕೀಯ ಮೌಲ್ಯಗಳ ಉಳಿವಿಗಾಗಿ ಅಹರ್ನಿಶಿ ಶ್ರಮಿಸಿದವರು. ಮಾತ್ರವಲ್ಲ, ಆ ಮೌಲ್ಯಗಳಿಗಾಗಿ ಸಾಕಷ್ಟು ಬಾರಿ ಬೆಲೆಯನ್ನೂ ತೆತ್ತ ಆದರ್ಶ ನಾಯಕರೂ ಹೌದು.

1983ರಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸೇತರ ಜನತಾ ಪಕ್ಷ (ನೇಗಿಲು ಹೊತ್ತ ರೈತ ಚಿಹ್ನೆ) ಸರಕಾರದ ಮುಖ್ಯಮಂತ್ರಿಯಾಗಿದ್ದ ಹೆಗಡೆ ಅವರು ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಮಾಡಿದ ಕೆಲಸ ಅಷ್ಟಿಷ್ಟಲ್ಲ. ಇವರ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂಬಂತೆ ಎದುರಾದ ಭೀಕರ ಬರಗಾಲದ ಸಂದರ್ಭ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಅಬ್ದುಲ್‌ ನಜೀರ್‌ ಸಾಬ್‌ ಅವರ ಮೂಲಕ ನಾಡಿನಾದ್ಯಂತ ಕೊಳವೆ ಬಾವಿಗಳನ್ನು ಕೊರೆಸಿ ನೀರಿನ ಬವಣೆ ನೀಗಿಸುವಲ್ಲಿ ಯಶಸ್ವಿಯಾದರು. ಮಾತ್ರವಲ್ಲ, ರಾಜ್ಯಾದ್ಯಂತ ಗೋಶಾಲೆಗಳನ್ನು ತೆರೆದು ಜಾನುವಾರುಗಳ ಸಂರಕ್ಷಣೆ ಮಾಡಿ, ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಶಾಲಾ ಮಕ್ಕಳಿಗೆ ಉಚಿತ ಬಸ್‌ ಪಾಸ್‌, ವಿಧವಾ ಮಾಸಾಶನ ಹೀಗೆ ಹತ್ತು ಹಲವು ಯೋಜನೆಗಳನ್ನು ಅಮೂಲಾಗ್ರವಾಗಿ ಜಾರಿಗೆ ತರುವ ಮೂಲಕ ನಾಡಿನ ಜನಮನದಲ್ಲಿ ಭದ್ರವಾಗಿ ನೆಲೆಯೂರಿದ್ದರು. ಅವರು ಜಾರಿಗೆ ತಂದ ಪಂಚಾಯತ್‌ ರಾಜ್‌ ವ್ಯವಸ್ಥೆ ಇಡೀ ದೇಶಕ್ಕೇ ಮಾದರಿಯಾಯಿತು. ಹೆಗಡೆ ಅವರು ಪ್ರತಿಷ್ಠಾಪಿಸಿದ ಲೋಕಾಯುಕ್ತ ಸಂಸ್ಥೆ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದೆ ಎಂಬುದು ನಿರ್ವಿವಾದದ ಸಂಗತಿ.
“ಆಡಿದರೆ ಮುತ್ತಿನ ಹಾರದಂತಿರಬೇಕು, ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು’ ಎಂಬ ಜಗಜ್ಯೋತಿ ಬಸವಣ್ಣವರ ವಚನದ ಸಾಲಿನಂತೆ ಹೆಗಡೆ ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಹಿತ-ಮಿತ ನಡೆ-ನುಡಿಯೊಂದಿಗೆ ನಾಡಿನ ಜನರ ಹೃದಯ ಗೆದ್ದಿದ್ದರು. ಅವರು ಭಾಗವಹಿಸುತ್ತಿದ್ದ ಸಭೆ-ಸಮಾರಂಭಗಳಲ್ಲಿ ಜನಸಾಗರವೇ ಸೇರುತ್ತಿತ್ತು. ಅಂಥ ಧೀಮಂತ ವ್ಯಕ್ತಿತ್ವ ಅವರಲ್ಲಿತ್ತು.

ಇನ್ನು ಎಂತಹ ಸಂದರ್ಭದಲ್ಲೂ ಹೆಗಡೆ ಅವರು ಅಸಾಂವಿಧಾನಿಕ ಭಾಷೆ ಪ್ರಯೋಗಿಸಿದ ಉದಾಹರಣೆಗಳು ತೀರಾ ವಿರಳ ಎನ್ನಬಹುದು. ಅವರನ್ನು ಜನತಾದಳದಿಂದ ಹೊರಹಾಕಿದಾಗಲೂ ತಮ್ಮ ಗರಡಿಯಲ್ಲೇ ಬೆಳೆದ, ಜತೆಗಿದ್ದ ಕೆಲ ನಾಯಕರು ತಮ್ಮಿಂದ ದೂರವಾಗುತ್ತಿದ್ದಾರೆ ಎಂಬ ಸುಳಿವು ದೊರೆತಾಗ ತೀರಾ ನೊಂದುಕೊಂಡಿದ್ದರು. ಆಗ ಮನನೊಂದು ತೀರಾ ಭಾವುಕರಾಗಿ ಸಾತ್ವಿಕ ಆಕ್ರೋಶ ಹೊರಹಾಕಿದ್ದರು. ಆದರೆ, ತಮ್ಮ ರಾಜಕೀಯ ಕಡುವೈರಿಯನ್ನೂ ಕೂಡ ಎಂದೂ ನಿಂದಿಸಿ ಮಾತನಾಡಿದವರಲ್ಲ. ಅಂಥ ರಾಜಕೀಯ ಸಂಸ್ಕಾರ ಅವರಲ್ಲಿತ್ತು.
ಇಂತಹ ಆದರ್ಶ ರಾಜಕಾರಣಿಯಾಗಿದ್ದ ಹೆಗಡೆ ಅವರ ರಾಜಕೀಯ ಮೌಲ್ಯಗಳು ಹಾಗೂ ಚಿಂತನೆಗಳನ್ನು ಯುವಜನತೆಗೆ ತಿಳಿಸಲು ರಾಜ್ಯದ ವಿವಿಯೊಂದರಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಭರವಸೆ ಸಾಕಾರವಾಗಿಲ್ಲ. ಹೆಗಡೆಯವರ ರಾಜಕೀಯ ಗರಡಿಯಲ್ಲೇ ಬೆಳೆದ ಸಿದ್ದರಾಮಯ್ಯ ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ, ಅಧ್ಯಯನ ಪೀಠ ಸ್ಥಾಪಿಸಿದ್ದೇ ಆದಲ್ಲಿ, ಭವಿಷ್ಯದ ಪೀಳಿಗೆಗೆ ಹೆಗಡೆ ಅವರ ರಾಜಕೀಯ ವಿಚಾರಧಾರೆಗಳ ಪರಿಚಯವಾಗಿ, ರಾಜಕಾರಣದಲ್ಲಿ ಮೌಲ್ಯಗಳ ಸಂರಕ್ಷಣೆಗೆ ಸಹಕಾರಿಯಾಗಬಲ್ಲದು.

– ಅಶೋಕ ಸ. ಬೆಳಗಲಿ (ಕುದರಿ), ಹುಬ್ಬಳ್ಳಿ

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

PM has not read Constitution, I guarantee this: Rahul

Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.