Tamil ಸಿನೆಮಾ ನಿರ್ಮಾಪಕ ಡ್ರಗ್ಸ್ ಜಾಲದ ಮಾಸ್ಟರ್‌ಮೈಂಡ್!
2,000 ಕೋಟಿ ಮೌಲ್ಯದ ಡ್ರಗ್ಸ್ ಸಾಗಣೆ ಜಾಲ ಬಯಲು
Team Udayavani, Feb 26, 2024, 6:30 AM IST
ಹೊಸದಿಲ್ಲಿ: ಇತ್ತೀಚೆಗೆ ದೆಹಲಿಯಲ್ಲಿ ಮಾದಕದ್ರವ್ಯ ತಯಾರಿಕೆಗೆ ಬಳಸುತ್ತಿದ್ದ ಭಾರೀ ಪ್ರಮಾಣದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದ ಎನ್‌ಸಿಬಿ(ಮಾದಕವಸ್ತು ನಿಯಂತ್ರಣ ಸಂಸ್ಥೆ) ಅಧಿಕಾರಿಗಳು ಈಗ ಈ ಜಾಲದ ಹಿಂದಿನ ಮಾಸ್ಟರ್‌ಮೈಂಡ್ ಯಾರೆಂದು ಪತ್ತೆಹಚ್ಚಿದ್ದಾರೆ.
ತಮಿಳು ಸಿನೆಮಾ ರಂಗದ ಖ್ಯಾತ ನಿರ್ಮಾ ಪಕನೇ ಈ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ರೂವಾರಿಯಂತೆ! ಹೀಗೆಂದು ರವಿವಾರ ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ತಿಳಿಸಿದೆ. ಆದರೆ, ಆ ನಿರ್ಮಾಪಕ ಈಗ ನಾಪತ್ತೆಯಾಗಿದ್ದು, ಆತನನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದೂ ಎನ್‌ಸಿಬಿ ಮಾಹಿತಿ ನೀಡಿದೆ.
ದಿಲ್ಲಿ ಪಶ್ಚಿಮ ಭಾಗದ ಗೋದಾಮಿನ ಮೇಲೆ ಫೆ.15ರಂದು ಜಂಟಿ ದಾಳಿ ನಡೆಸಿದ್ದ ಎನ್‌ಸಿಬಿ ಮತ್ತು ದಿಲ್ಲಿ ಪೊಲೀಸರು. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಸಾಗಿಸಲಾಗುತ್ತಿದ್ದ ಸುಮಾರು 50 ಕೆ.ಜಿ. ತೂಕದ ಸೂಡೊಎಫಿಡ್ರೈನ್ ಮಾಲ್ ಅನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಿದ್ದರು.
ಈ ಜಾಲವು ಕಳೆದ 3 ವರ್ಷಗಳಲ್ಲಿ ಸುಮಾರು 3,500 ಕೆ.ಜಿ. ತೂಕದ ಸೂಡೊಎಫಿಡ್ರೈನ್ ಡ್ರಗ್ಸ್ ಅನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡಿದ್ದು, ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಮೌಲ್ಯದ್ದಾಗಿದೆ. ಆಹಾರ ಪದಾರ್ಥಗಳಲ್ಲಿ ಅಡಗಿಸಿಟ್ಟು ಭಾರತದಿಂದ ಡ್ರಗ್ಸ್ ಸಾಗಿಸುತ್ತಿರುವ ಬಗ್ಗೆ 4 ತಿಂಗಳುಗಳ ಹಿಂದೆಯೇ ಅಧಿಕಾರಿಗಳು ಸುಳಿವು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.