ಮಸೀದಿಯೋ ಅಥವಾ ಮಂದಿರವೋ…? ಬಾಬ್ರಿ ಮಸೀದಿಯಿಂದ ಕುತುಬ್ ಮಿನಾರ್‌ವರೆಗೆ…
ದಿನದಿಂದ ದಿನಕ್ಕೆ ಮಂದಿರ-ಮಸೀದಿ ವಿವಾದ ಮುಂದುವರಿಯುತ್ತಲೇ ಇದೆ.
Team Udayavani
ಕೇವಲ ಉತ್ತರ ಭಾರತದಲ್ಲಷ್ಟೇ ಅಲ್ಲ, ದಕ್ಷಿಣ ಭಾರತದಲ್ಲಿಯೂ ದೇಗುಲವೋ ಅಥವಾ ಮಂದಿರವೋ ಎಂಬ ಕುರಿತ ಕೆಲವು ವಿವಾದಗಳಿವೆ. ಅಂದರೆ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮೀಯಾ ಮಸೀದಿ ಹಿಂದೆ ಹನುಮಾನ್ ದೇಗುಲವಾಗಿತ್ತು. ಹೀಗಾಗಿ ಭಾರತೀಯ ಪುರಾತತ್ವ ಇಲಾಖೆ ಕಡೆಯಿಂದ ಸ್ಥಳದ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರಕಾರ, ಟಿಪ್ಪು ಸುಲ್ತಾನ್ ಕಾಲದಲ್ಲಿ ಇಲ್ಲಿದ್ದ ಹನುಮಾನ್ ದೇಗುಲವನ್ನು ಕೆಡವಿ, ಇಲ್ಲಿ ಮಸೀದಿ ನಿರ್ಮಿಸಲಾಗಿದೆ. ಒಂದು ವೇಳೆ ರಾಜ್ಯ ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ, ಹೈಕೋರ್ಟ್ ಮೊರೆಹೋಗುವುದಾಗಿ ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ...