ವಿಧಾನಸಭಾ ಕದನ-ಮೊದಲ ಸುತ್ತು: ಬಾದಾಮಿಯಿಂದ ಸಿದ್ದರಾಮಯ್ಯ ಹುಣಸೂರಿಗೆ ಹೋಗುತ್ತಾರಾ?
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸಮಬಲದ ಹೋರಾಟದ ಕಣದಂತಿದೆ.
Team Udayavani
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ದಾಳ ಉರುಳಿಸಲು ಆರಂಭಿಸಿದೆ. ಈ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡರಿಗೆ ಸಡ್ಡು ಹೊಡೆಯಲು ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರೆ. ಮೈಸೂರು ಜಿಲ್ಲೆಯ ಮಟ್ಟಿಗಂತೂ ಜೆಡಿಎಸ್‌ಗೆ ಈಗ ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಅವರೇ ಹೈಕಮಾಂಡ್ ಆಗಿದ್ದಾರೆ.ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು 203ರ ಚುನಾವಣೆಯಲ್ಲಿ ಸ್ಪರ್ಧಿಸಬಹುದಾದ ಕ್ಷೇತ್ರಗಳಲ್ಲಿ ಹುಣಸೂರಿನ ಹೆಸರೂ ಕೇಳಿ ಬಂದಿದೆ. ಸಿದ್ದರಾಮಯ್ಯ ಹುಣಸೂರಿನಿಂದ ಸ್ಪರ್ಧಿಸಬೇಕೆಂಬುದು ಈ ಕ್ಷೇತ್ರದ ಕಾಂಗ್ರೆಸ್‌ನ ಕೆಲವು ಮುಖಂಡರ ಆಗ್ರಹವಾಗಿದೆ. ಮೂರು ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಗುದ್ದಾಟ ಈಗಲೇ ಆರಂಭವಾಗಿದೆ...