ರಕ್ಷಾಬಂಧನ‌: ಭ್ರಾತೃ – ಭಗಿನಿ ಬಾಂಧವ್ಯ ಬಂಧನ

Team Udayavani, Aug 3, 2020, 1:32 PM IST

ರಕ್ಷಾಬಂಧನ‌: ಭ್ರಾತೃ – ಭಗಿನಿ ಬಾಂಧವ್ಯ ಬಂಧನ

ಸಹೋದರ – ಸಹೋದರಿ‌ ನಡುವಿನ ಭಾವನಾತ್ಮಕ ಬಾಂಧವ್ಯದ ಸಾಕಲ್ಯ ಸಾಕ್ಷಾತ್ಕಾರವೇ ‘ರಕ್ಷಾಬಂಧನ’. ‘ಸಹಭವ’ರಲ್ಲಿ ಬದ್ದವಾಗಿರುವ ಬಂಧವೇ ಸಾರ್ವತ್ರಿಕವಾಗುತ್ತಾ ಸಮಾಜದಲ್ಲಿ ಸರ್ವವ್ಯಾಪಿಯಾಗುವಷ್ಟು ಅರಳುವ, ದೇಶದಾದ್ಯಂತ ವ್ಯಾಪಿಸುವ ಆಚರಣೆಯೇ ‘ರಕ್ಷಾಬಂಧನ”; ಇದು ಭಾರತೀಯ ಸಂಸ್ಕೃತಿಯ ಸೊಗಸು.

ದೇಶದ ಇತಿಹಾಸದಲ್ಲಿ ಅನಿರೀಕ್ಷಿತ ಪರಿವರ್ತನೆಗೆ , ದೇಶದ ಸಂಸ್ಕಾರ ವಿಶ್ವ ಸಹೋದರತೆಯ ಎತ್ತರಕ್ಕೆ ಏರುವುದಕ್ಕೆ  “ರಾಖಿ” ಕಾರಣವಾಗುವುದು ಒಂದು ಅದ್ಭುತ ಮನೋಧರ್ಮದ ದರ್ಶನ. ಅದೇ ಭಾರತೀಯ ಜೀವನ ವಿಧಾನದ ವೈಶಾಲ್ಯತೆ . ಇದೇ ‘ಭ್ರಾತೃ – ಭಗಿನಿ ಬಾಂಧವ್ಯ ಬಂಧನ’.

“ಪರನಾರಿ ಸೋದರ” ಇದೊಂದು ಪ್ರತಿಜ್ಞೆಯಾಗಿ ಪುರಾಣಗಳಲ್ಲಿ , ದೇಶದ ಇತಿಹಾಸದಲ್ಲಿ ಕಾಣಸಿಗುವ ಒಂದು ರೋಚಕ ಸ್ವೀಕಾರ . ಇದು ಒಂದು “ಮೌಲ್ಯ”ವಾಗಿ ಆಚರಿಸಲ್ಪಟ್ಟು ‘ಸಂದೇಶ’ವಾಗುವ ಶೈಲಿ ನಮ್ಮ ನೆಲದ ವ್ಯಕ್ತಿತ್ವಗಳ ಹೃದಯಶ್ರೀಮಂತಿಕೆ. ನಡೆದುಹೋದ ಸಂಗತಿ, ವರ್ತಮಾನದ ಆಚಾರ – ವಿಚಾರ ,ಭವಿಷ್ಯಕ್ಕೆ ಮುಂದುವರಿಯುವ “ಬಾಂಧವ್ಯ ಬಂಧನ‌” . ಇಂತಹ ಸಂಸ್ಕಾರಗಳು ನಮ್ಮ ಬದುಕಿನ ಕ್ರಮಕ್ಕೆ, ಮನಸ್ಸಿನ ಆಲೋಚನೆಗಳಿಗೆ ಪ್ರತ್ಯಕ್ಷ ಸಾಕ್ಷಿ. ಇಂತಹ ನೂರಾರು ಮೌಲ್ಯಗಳಲ್ಲಿ ‘ರಕ್ಷಾಬಂಧನ’ ಒಂದು. ದೇಶದಲ್ಲಿ ನೆರವೇರುವ “ರಾಖೀ” ಅತ್ಯಂತ ಜನಪ್ರಿಯ ನಡವಳಿಕೆ.

ಪ್ರತಿವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ತಮ್ಮ ಸಹೋದರರಿಗೆ ಸಹೋದರಿಯರು ರಾಖೀ ಕಟ್ಟುವ ಮೂಲಕ ‘ನಮ್ಮ ಮಾನ – ಪ್ರಾಣ ಉಳಿಸುವ ಹೊಣೆ ನಿಮ್ಮದು’ ಎಂದು ನೆನಪಿಸುತ್ತಾರೆ.

ಉಡುಗೊರೆ ಪಡೆಯುತ್ತಾರೆ. ರಾಖೀ ಕಟ್ಟುವ ಸಿಹಿ ತಿನ್ನಿಸಿ – ತಿನ್ನುವ ,ಉಡುಗೊರೆ ಪಡೆಯುವ ಈ ಭಾವನಾತ್ಮಕ ಪರ್ವದಿನವು ಮನೆಯೊಳಗೆ ಒಡಹುಟ್ಟಿದ ಸಹೋದರ – ಸಹೋದರಿಯರ ನಡುವೆ ಸಂಭ್ರಮಿಸುವುದಿಲ್ಲ ಬದಲಿಗೆ ಒಂದು ನೆರಕರೆಯನ್ನು ಒಂದು ವ್ಯಾಪ್ತಿಯನ್ನು ಅಲ್ಲ ಇಡೀ ದೇಶದಾದ್ಯಂತ ವಿಜೃಂಭಿಸುತ್ತಿದೆ . ಸಹಭವರಾಗ ಬೇಕಿಲ್ಲ, ಅಂತಹ ‘ಪವಿತ್ರ ಭಾವಸ್ಪುರಣೆ’ ಸಾರ್ವತ್ರಿಕವಾಗುತ್ತಿರುವುದು ನಮ್ಮ ಸಾಂಸ್ಕೃತಿಕ ಭವ್ಯತೆ.

‌‌ಸಹೋದರ ಭಾವದ ವೈಶಾಲ್ಯತೆ

‌ಒಡಹುಟ್ಟಿದವರೊಂದಿಗೆ ಸಮಾಜದ ‘ಸ್ತ್ರೀ’ಯರೆಲ್ಲ ತನ್ನ ಸೋದರಿಯರು ಎಂಬ‌ ಉದಾತ್ತ ಭಾವದೊಂದಿಗೆ ಚಿತ್ತಶುದ್ಧಿಯ ಜೀವನಕ್ಕೆ “ರಾಖೀಬಂಧನ” ಇಂಬು ಕೊಡುತ್ತದೆ. ಅನಿವಾರ್ಯ ಆಪತ್ಕಾಲದಲ್ಲಿ ಯಾವಳೇ ಸ್ತ್ರೀಯ ಮಾನ – ಪ್ರಾಣಗಳ ರಕ್ಷಣೆಗೆ ಪ್ರಾಣಾರ್ಪಣೆಗೂ ಸಿದ್ಧನಾಗುವ  ಪುರುಷನ ಕರ್ತವ್ಯವಾದರೂ ಅದನ್ನು ರೂಢಿಸಿಕೊಳ್ಳುವ ಮನಃಸ್ಥಿತಿ ಏರ್ಪಡಲು ರಕ್ಷಾ ಬಂಧನ – ರಾಖೀ ಬಂಧನ ಆಚರಿಸಲ್ಪಡುತ್ತದೆ .

‘ರಕ್ಷಾಬಂಧನ’ಕ್ಕೆ ಮೀಸಲಾದ ದಿನ ಶ್ರಾವಣದ ಹುಣ್ಣಿಮೆ. ಪ್ರತಿ ಹುಣ್ಣಿಮೆಯೂ ಚಂದ್ರ ಪೂರ್ಣ ವೃದ್ಧಿಯೊಂದಿಗೆ ರಾರಾಜಿಸುವ ದಿನ. ಚಂದ್ರ ಮನಃಕಾರಕನಾದುದರಿಂದ, ಹುಣ್ಣಿಮೆಯೇ ಮನಸ್ಸಿನ ಮೇಲೆ ಪೂರ್ಣ ಪ್ರಮಾಣದ ಪರಿಣಾಮ ಬೀರುವ ಕಾಲವಾಗಿರುವುದರಿಂದ ಮನಸ್ಸಿನ ಭಾವ ಸಂಬಂಧಿಯಾದ ನಿರ್ಧಾರಕ್ಕೆ ಸಕಾಲವೆಂದು ತಿಳಿಯಬಹುದಲ್ಲ.

ಶ್ರಾವಣ ಮಾಸವೂ ಒಂದು ಪ್ರೇರಣೆ ಸಹಜವಾಗಿ ಒದಗುವ ಶ್ರಾಯ. ನಾಡಿಗೆ ,ಬೀಡಿಗೆ ಬರುವ ಶ್ರಾವಣ ಮನಸ್ಸಿಗೆ ಬಾರದೆ ಇದ್ದೀತೆ ?, ಅದೇ ಶ್ರಾವಣದ ಕವಿ ಬೇಂದ್ರೆಯವರ “ಬಂತು ಶ್ರಾವಣ…” ಲವಲವಿಕೆ ತುಂಬಿದ ಉದ್ಗಾರ. ಇದೇ ಭಾವಗಳು ಬಿರಿಯುವ, ಸುಗಂಧ ಬೀರುವ ಸುಸಮಯ.

ರಾಖೀ ಎಷ್ಟೇ ವೈವಿಧ್ಯದ್ದಾದರೂ, ರಂಗುರಂಗಿನದ್ದಾದರೂ ಇದರ ಬಂಧನ ಪ್ರಕ್ರಿಯೆ ದಾರದ ಮೂಲಕ ತಾನೇ? ಈ ದಾರ ಒಂದು ಕರ್ತವ್ಯಕ್ಕೆ, ಜವಾಬ್ದಾರಿಗೆ‌ ನಿಯೋಜಿಸಲ್ಪಟ್ಟ ಭಾವವನ್ನು ಮೂಡಿಸಿದರೆ ಆಚರಣೆಯ ಆಶಯ ನೆರವೇರಿದಂತೆ.

ವ್ರತ, ಪೂಜೆ, ಮಹೋತ್ಸವ, ಮಹಾಯಾಗ, ಮದುವೆ ಮುಂತಾದ ಉತ್ಸವಗಳು ನಿರ್ವಿಘ್ನವಾಗಿ ನೆರವೇರಲೆಂದು ದೇವರಲ್ಲಿ ಪ್ರಾರ್ಥಿಸಿ ‘ಕಂಕಣಬಂಧ’ದಿಂದ ದೀಕ್ಷೆ ಸ್ವೀಕರಿಸುವ ವಿಧಿಯೊಂದು ದೇಶದಲ್ಲಿ ರೂಢಿಯಲ್ಲಿದೆ .ದುಷ್ಟ ಶಕ್ತಿಗಳು ಸತ್ಕರ್ಮಗಳಿಗೆ ಆತಂಕ ಒಡ್ಡದಿರಲಿ ಎಂಬುದು ಇಲ್ಲಿಯ ‘ನಾಂದೀ’ . ಸತ್ಕಾರ್ಯ ಆರಂಭದಿಂದ ಸಮಾರೋಪ ಪರ್ಯಂತ ಕಂಕಣಬಂಧ ಕಟ್ಟಿಸಿಕೊಳ್ಳುವವರು ದೀಕ್ಷಾಬದ್ಧರೆಂದು ಅರ್ಥ. ಅನ್ಯ ಕಾರ್ಯಗಳ ಬಗ್ಗೆ ಆಲೋಚಿಸದೆ ಸಂಪೂರ್ಣ ಸಂಕಲ್ಪಿತ ಸತ್ಕಾರ್ಯದಲ್ಲೇ ನಿರತರಾಗಿಬೇಕೆಂಬುದು ರಕ್ಷಾ ಬಂಧನದ ಮುಖ್ಯ ಉದ್ದೇಶವಾಗಿದೆ.

ಕೆ.ಎಲ್.‌ಕುಂಡಂತಾಯ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksah Bandhan or Rakhi, Indian festival for brothers and sisters

ರಕ್ಷಾ ಬಂಧನ ವಿಶೇಷ: ದ್ರೌಪದಿಯ ಋಣ ತೀರಿಸಿದ ಕೃಷ್ಣ

ರಕ್ಷಾಬಂಧನ 2020: “ಅಪ್ಪನಂಥಾ ಅಣ್ಣ”

ರಕ್ಷಾಬಂಧನ 2020: “ಅಪ್ಪನಂಥಾ ಅಣ್ಣ”

ರಕ್ಷಾ ಬಂಧನ ವಿಶೇಷ : “ಸಹೋದರಿಯರ ಪ್ರೀತಿಯ ರಕ್ಷಾ ಬಂಧನ “

ರಕ್ಷಾ ಬಂಧನ ವಿಶೇಷ : “ಸಹೋದರಿಯರ ಪ್ರೀತಿಯ ರಕ್ಷಾ ಬಂಧನ “

ರಕ್ಷಾ ಬಂಧನ ವಿಶೇಷ; ಅಜ್ಜಿಯ ಹಣದಿಂದ ಕೊಂಡ ರಾಕಿ

ರಕ್ಷಾ ಬಂಧನ ವಿಶೇಷ; ಅಜ್ಜಿಯ ಹಣದಿಂದ ಕೊಂಡ ರಾಕಿ

ರಕ್ಷಾ ಬಂಧನ ವಿಶೇಷ : ಬಾಂಧವ್ಯ ಬೆಸೆಯುವ ಬಿಂದು ರಕ್ಷಾ ಬಂಧನ

ರಕ್ಷಾ ಬಂಧನ ವಿಶೇಷ : ಬಾಂಧವ್ಯ ಬೆಸೆಯುವ ಬಿಂದು ರಕ್ಷಾ ಬಂಧನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.