ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Apr 14, 2022, 7:20 AM IST
ಮೇಷ:
ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು. ಸಹೋದ್ಯೋಗಿಗಳ ಅಭಿಪ್ರಾಯ ಸಲಹೆಯಿಂದ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ.
ವೃಷಭ:
ಸಂದಭೋìಚಿತ ವಿವೇಕತನ ನಡೆಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ದೇವತಾನುಗ್ರಹದಿಂದ ಕೂಡಿದ ದಿನ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗುವ ಸಮಯ.
ಮಿಥುನ:
ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಗುರುಹಿರಿಯ ಮಾರ್ಗದರ್ಶನದ ಲಾಭ. ಗೃಹ ವಿಚಾರದಲ್ಲಿ ಧನವ್ಯಯ. ಮಾನಸಿಕ ಹಾಗೂ ದೈಹಿಕವಾಗಿಯೂ ನೆಮ್ಮದಿ.
ಕರ್ಕ:
ಬಹು ಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ. ಕುಟುಂಬಿಕ ರಿಂದ ಪ್ರೋತ್ಸಾಹ. ಹಣಕಾಸಿನ ವಿಷಯದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಗೃಹದಲ್ಲಿ ಸಂತಸದ ವಾತಾವರಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ.
ಸಿಂಹ:
ಆಚಾರ ವಿಚಾರಗಳಿಗೆ ಮಾನ್ಯತೆ ನೀಡಿ. ಧನಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರ ಮಾತನ್ನು ಮೀರದಿರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.
ಕನ್ಯಾ:
ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ಉತ್ತಮ ಆರೋಗ್ಯ. ರಾಜಕೀಯ, ಸರಕಾರಿ ವರ್ಗದವರ ಸಹಾಯ. ಸಾಂಸಾರಿಕ ಸುಖ ವೃದ್ಧಿ. ದೂರದ ವ್ಯವಹಾರಗಳಿಂದ ಧನ ವೃದ್ಧಿ.
ತುಲಾ:
ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಕೂಡಿ ಬರುವ ಸಮಯ. ಸಂಪತ್ತು ವೃದ್ಧಿ. ನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕವಾಗಿ ಮನೆಯಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ತಾಳ್ಮೆಯಿಂದ ವರ್ತಿಸಿ. ಹಿರಿಯರ ಆರೋಗ್ಯ ವೃದ್ಧಿ.
ವೃಶ್ಚಿಕ:
ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ ದೇವತಾ ಸಂದರ್ಶನ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಮನೆಯಲ್ಲಿ ಸಂತಸ.
ಧನು:
ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫಲತೆ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಸಾಂಸಾರಿಕವಾಗಿ ಸಹನೆ ತಾಳ್ಮೆ ಇರಲಿ. ಆರೋಗ್ಯ ಸ್ಥಿರ.
ಮಕರ:
ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರ ವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ.
ಕುಂಭ:
ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿ ಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ.
ಮೀನ:
ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ವಿದ್ಯಾರ್ಥಿಗಳು ವಿದ್ಯಾರ್ಜನೆಯ ಬಗ್ಗೆ ಗಮನಹರಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.