ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Mar 17, 2022, 7:35 AM IST
ಮೇಷ:
ಘರ್ಷಣೆಯೊಂದಿಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರ ಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.
ವೃಷಭ:
ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೆಚ್ಚಿನ ನಿರೀಕ್ಷೆ ಸಲ್ಲದು.
ಮಿಥುನ:
ನಿರೀಕ್ಷೆಯಂತೆ ಉತ್ತಮ ವಾಕ್ ಚತುರತೆಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.
ಕರ್ಕ:
ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.
ಸಿಂಹ:
ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.
ಕನ್ಯಾ:
ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಮಕ್ಕಳಿಂದ ಹೆಚ್ಚಿದ ಸಂತೋಷ. ವಾಕ್ ಚತುರತೆಯಿಂದ ಜನರಂಜನೆ.
ತುಲಾ:
ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ:
ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವ ರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.
ಧನು:
ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.
ಮಕರ:
ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು ಜನಮನ್ನಣೆ. ಉತ್ತಮ ವಾಕ್ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ:
ಉತ್ತಮ ಕಾರ್ಯ ಚಟುವಟಿಕೆ ಯಿಂದ ಕೂಡಿದ ದಿನಚರಿ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದಿಂದ ಕಾರ್ಯ ಸಫಲತೆ.
ಮೀನ:
ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ಆಸ್ತಿ ಸಂಬಂಧ ವಿಷಯಗಳಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ತಾಳ್ಮೆ ಸಹನೆ ಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.