![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 5, 2023, 7:13 AM IST
ಮೇಷ: ಅಧಿಕ ಹಠ ಮಾಡದೇ ಸಹನೆ ಪರಸ್ಪರ ಸಹಕಾರದಿಂದ ಕಾರ್ಯ ಪ್ರವೃತ್ತರಾದರೆ ಯಶಸ್ಸು ಲಭಿಸಲಿದೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ಪ್ರಾಮಾಣಿಕತೆಯ ಪ್ರದರ್ಶನದಿಂದ ಪ್ರೋತ್ಸಾಹ.
ವೃಷಭ: ಗೌರವ ಸ್ಥಾನಮಾನಾಧಿ ಗಳ ವೃದ್ಧಿ. ಜನಮನ್ನಣೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ದೀರ್ಘ ಪ್ರಯಾಣ. ದೇಶ ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ. ಬಂಧುಮಿತ್ರರ ಭೇಟಿಯಿಂದ ಮಾನಸಿಕ ನೆಮ್ಮದಿ.
ಮಿಥುನ: ಸಂಶೋಧಕರಿಗೆ, ಆಳವಾದ ಅಧ್ಯಯನ ಪ್ರವೃತ್ತ ರಿಗೆ ಅನುಕೂಲಕರ ದಿನ. ಆರೋಗ್ಯ ಬಗ್ಗೆ ಗಮನಹರಿಸಿ. ಅತೀ ದೇಹಾಯಾಸ ಸಂಭವ. ದೂರದ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಮಾರ್ಗದರ್ಶನದ ಲಾಭ.
ಕರ್ಕ: ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ. ಪಾರದರ್ಶಕತೆ ಸ್ಪಷ್ಟತೆಯೊಂದಿಗೆ ವ್ಯವಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರಕಲಿದೆ. ಮಾತೃಸಮಾನರಿಂದ ಪ್ರೋತ್ಸಾಹ.
ಸಿಂಹ: ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಹಾರ ಸೇವನೆಯಲ್ಲಿ ಮುಂಜಾಗ್ರತೆ ವಹಿಸಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿ ಗಳಿಗೆ ಅನುಕೂಲಕರ ಪರಿಸ್ಥಿತಿ. ದೇವತಾ ಪ್ರಾರ್ಥನೆಯಿಂದ ನೆರವು.
ಕನ್ಯಾ: ಆರೋಗ್ಯ ವೃದ್ಧಿ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷದ ವಾರ್ತೆ. ವ್ಯವಹಾರಗಳಲ್ಲಿ ಗೌರವ.
ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.
ಧನು: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯ ಗಳಲ್ಲಿ ಭಾಗಿ. ಹಣಕಾಸಿನ ಬಗ್ಗೆ ಜಾಗ್ರತೆ.
ಮಕರ: ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಆರೋಗ್ಯ ಗಮನಿಸಿ.
ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರ ದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ.
ಮೀನ: ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ. ಮಕ್ಕಳಿಂದ ಸುವಾರ್ತೆ. ಸಾಂಸಾರಿಕವಾಗಿ ನೆಮ್ಮದಿಯ ದಿನ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
You seem to have an Ad Blocker on.
To continue reading, please turn it off or whitelist Udayavani.