![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 5, 2023, 6:55 AM IST
ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸನ್ನಿಧಾನಕ್ಕೆ ಭೇಟಿ. ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯಗಳಲ್ಲಿ ಸುಖ ಸಂತೋಷ ವೃದ್ಧಿ. ಅನಿರೀಕ್ಷಿತ ಧನ ಲಾಭ. ಆರೋಗ್ಯ ಸುದೃಢ.
ವೃಷಭ: ದೂರ ಸಂಚಾರ. ದೂರದ ವಿದೇಶ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿನ ವರಮಾನ. ಸತ್ಕಾರ್ಯಕ್ಕೆ ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.
ಮಿಥುನ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಸಣ್ಣ ಪ್ರಯಾಣ. ಪರರಿಗೆ ಸಹಾಯ ಮಾಡಿದ ತೃಪ್ತಿ. ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉತ್ತಮ ವಾಕ್ ಚತುರತೆಯ ಕಾರ್ಯವೈಖರಿ.
ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ಗಳಲ್ಲಿ ಕೀರ್ತಿ ಸಂಪಾದನೆ. ಮೆಚ್ಚುಗೆ. ಅನಿರೀಕ್ಷಿತ ಪ್ರಗತಿ. ಗೃಹದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆದು ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಕಾಲ.
ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫಲತೆ. ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದರಿಂದ ಮೆಚ್ಚುಗೆ ಅಧಿಕಾರ ಪ್ರಾಪ್ತಿ. ಸಂದಭೋìಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿದ ವರಮಾನ. ಆರೋಗ್ಯದಲ್ಲಿ ಸುಧಾರಣೆ.
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗದಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.
ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಡದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.
ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ಅಭಿವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ . ಗೃಹೋಪಕರಣ ವಸ್ತು ಸಂಗ್ರಹ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯ.
ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ಸಮೃದ್ಧಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.