Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Team Udayavani, Dec 17, 2024, 7:15 AM IST
ಮೇಷ: ಮೇಲಿನವರನ್ನು ಮೆಚ್ಚಿಸಲು ಮೇಲಾಟ. ವೃತ್ತಿಪರರಿಗೆ ಸಮಯದೊಂದಿಗೆ ಸೆಣಸಾಟ. ವಿದ್ಯುತ್, ರಸ್ತೆ ಮೊದಲಾದ ಗುತ್ತಿಗೆದಾರರಿಗೆ ಮುಗ್ಗಟ್ಟು ಕೆಲವರ ಆರೋಗ್ಯದಲ್ಲಿ ಕೊಂಚ ಏರುಪೇರು.
ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೌಕರಿಯಲ್ಲಿರುವ ಬಂಧುಗಳಿಂದ ಕರೆ.ಮಾಧ್ಯಮದವರಿಗೆ ಅಧಿಕಾರಸ್ಥರ ಆಮಿಷ. ಗೃಹಿಣಿಯರ ಸ್ವಾವಲಂಬನೆ ಉದ್ಯಮದಲ್ಲಿ ಪ್ರಗತಿ.
ಮಿಥುನ: ಕಠಿನ ಪರಿಶ್ರಮಿಗಳಿಗೆ ಹೆಚ್ಚು ಜವಾಬ್ದಾರಿಗಳು. ಅಧಿಕಾರಿಗಳಿಗೆ ರಾಜಕಾರಣಿಗಳ ಒತ್ತಡ. ವ್ಯಾಪಾರಿ ವರ್ಗಕ್ಕೆ ತೃಪ್ತಿಕರ ಲಾಭ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ.
ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲಕರ ಸ್ಪಂದನ.
ಸಿಂಹ: ಉದ್ಯಮಗಳಿಗೆ ಶುಕ್ರದೆಶೆ ಆರಂಭ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸಂಸಾರ ಸುಖ ಉತ್ತಮ. ಪ್ರಾಪ್ತವಯಸ್ಕರಿಗೆ ಕಂಕಣಬಲ.
ಕನ್ಯಾ: ದೇಹಾಲಸ್ಯದಿಂದ ಕಾರ್ಯ ವಿಳಂಬ. ಸಹೋದ್ಯೋಗಿಯ ಸಹಾಯದಿಂದ ಕೆಲಸ ಪರಿಪೂರ್ಣ. ಅಪರೂಪದ ಗೆಳೆಯರ ಆಗಮನ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ. ಮನೆಯಲ್ಲಿ ಉಲ್ಲಾಸದ ವಾತಾವರಣ.
ತುಲಾ: ಖಾಸಗಿ ರಂಗದ ನೌಕರರಿಗೆ ಹೊಸ ಅವಕಾಶಗಳು. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪಂಚಮ ಶನಿಯ ಮಹಿಮೆಯಿಂದ ಸ್ವಲ್ಪ ಕಿರಿಕಿರಿ.
ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮರದ ಸಾಮಗ್ರಿಗಳ ನಿರ್ಮಾಪಕರಿಗೆ ಉತ್ತಮ ಬೇಡಿಕೆ.
ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಕೈ ಕಸಬುದಾರರಿಗೆ ಕೈತುಂಬಾ ಕೆಲಸ.ಬೌದ್ಧಿಕ ಕಾರ್ಯಕರ್ತರಿಗೆ ಬಹುವಿಧ ಒತ್ತಡ.
ಮಕರ: ಸಹೋದ್ಯೋಗಿಗಳಿಂದ ಹಿತಕರ ವರ್ತನೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್ ಡಿಸೈನಿಂಗ್ ಪರಿಣತರಿಗೆ ಉದ್ಯೋಗಾವಕಾಶ.
ಕುಂಭ: ಹೊಸ ಕಾರ್ಯಕ್ಷೇತ್ರಕ್ಕಾಗಿ ಅನ್ವೇಷಣೆ. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ಶುಭ ಸಮಾಚಾರ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ ಮಧ್ಯಮ.
ಮೀನ: ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಇಲಾಖೆಗಳಿಂದ ಉತ್ತಮ ಸ್ಪಂದನ. ಕೆಲವು ಬಗೆಯ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಎಲ್ಲರ ಸಹಕಾರ. ಮಕ್ಕಳಿಗೆ ಪಾಠೇತರ ಚಟುವಟಿಕೆಗಳ ಆಕರ್ಷಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ
Daily Horoscope: ಕುಟುಂಬದಲ್ಲಿ ಕಿರಿಯರ ವಿವಾಹ ಪ್ರಸ್ತಾವ, ನೌಕರರಿಗೆ ಆರ್ಥಿಕ ಪ್ರೋತ್ಸಾಹ
MUST WATCH
ಹೊಸ ಸೇರ್ಪಡೆ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.