Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Team Udayavani, Dec 18, 2024, 7:21 AM IST
ಮೇಷ: ಈ ದಿನ ಬಹುಪಾಲು ಶುಭಫಲಗಳು. ಉದ್ಯೋಗದಲ್ಲಿ ವಿಶೇಷ ಸಾಧನೆ ನಿಮ್ಮದಾಗ ಲಿದೆ. ಉದ್ಯೋಗ ಬದಲಾವಣೆಯ ಯೋಚನೆ ಅನವಶ್ಯ. ಉದ್ಯಮದಲ್ಲಿ ಉತ್ಪಾದನೆಯ ಪ್ರಮಾಣ ಕುಗ್ಗದು. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ.
ವೃಷಭ: ಸಾಕಷ್ಟು ವಿಮರ್ಶಿಸಿ ಮುನ್ನಡೆ ಯಿರಿ. ಉದ್ಯೋಗದಲ್ಲಿ ತೃಪ್ತಿ, ವಿತ್ತ ಸಂಸ್ಥೆಯಿಂದ ಧನಸಹಾಯ ಸಕಾಲಕ್ಕೆ ಲಭ್ಯ. ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ. ಸಂಸಾರದಲ್ಲಿ ಶಾಂತಿ, ಸಮಾಧಾನ.
ಮಿಥುನ: ಉದ್ಯೋಗದಲ್ಲಿ ಸಹಜ ಪರಿಸ್ಥಿತಿ. ಸೇವಾ ಹಿರಿತನ, ಅನುಭವಕ್ಕೆ ಮಾನ್ಯತೆ. ಸ್ವಂತ ಉದ್ಯಮ ಆರ್ಥಿಕ ಮುಗ್ಗಟ್ಟು ಬಹುತೇಕ ಪರಿಹಾರ. ಮಹಿಳೆಯರ ಸ್ವಾವಲಂಬನೆ ಸಾಧನೆ ಪ್ರಗತಿಯಲ್ಲಿ.ಅನವಶ್ಯ ಚರ್ಚೆಯಲ್ಲಿ ಮುಳುಗಬೇಡಿ.
ಕರ್ಕಾಟಕ: ಅನಪೇಕ್ಷಿತ ವಿದ್ಯಮಾನಗಳಿಂದ ಕಂಗೆಡದಿರಿ. ಉದ್ಯೋಗ ಸ್ಥಾನದಲ್ಲಿ ಸಹಜ ಸ್ಥಿತಿ. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ನೆಂಟಸ್ತಿಕೆ ಹುಡುಕು ತ್ತಿರುವವರಿಗೆ ಶುಭಸೂಚನೆ. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ.
ಸಿಂಹ: ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಪರವೂರಿನಲ್ಲಿರುವ ಬಂಧುಗಳ ಅನಿರೀಕ್ಷಿತ ಆಗಮನ. ಗೃಹೋತ್ಪನ್ನ ಖಾದ್ಯ ಪದಾರ್ಥಗಳಿಂದ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ಕನ್ಯಾ: ಉದ್ಯೋಗದಲ್ಲಿ ಸ್ಥಿರವಾಗಿ ನಿಲ್ಲುವ ಪ್ರಯತ್ನ. ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣ ವ್ಯಾಪಾರಿಗಳಿಗೆ ಉತ್ತಮ ಆದಾಯ. ವಿವಾಹಾಸಕ್ತರಿಗೆ ಒಳ್ಳೆಯ ಸಂಬಂಧ ಕೂಡಿ ಬರುವ ಸಾಧ್ಯತೆ.ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ.
ತುಲಾ: ಅಳುಕದೆ ಮುಂದುವರಿಯಿರಿ. ಪಂಚಮ ಶನಿಯ ಕಾಟವಿದ್ದರೂ ಉದ್ಯೋಗ ದಲ್ಲಿ ಒಳ್ಳೆಯ ಹೆಸರು ಸಾಧ್ಯ. ನೌಕರ ವರ್ಗದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.
ವೃಶ್ಚಿಕ: ಉದ್ಯೋಗದಲ್ಲಿ ಉನ್ನತಿಯ ಸೂಚನೆ. ಸ್ವಂತ ಉದ್ಯಮದ ಬೆಳವಣಿಗೆ ತೃಪ್ತಿಕರ. ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ದೇವಾಲಯಕ್ಕೆ ಭೇಟಿ.ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ.
ಧನು: ಹಿತಶತ್ರುಗಳ ಬಾಧೆಯಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ. ಕೃಷಿ ಕಾರ್ಯದಲ್ಲಿ ಪಾಲುಗೊಳ್ಳುವ ಪ್ರಯತ್ನದಲ್ಲಿ ಮುನ್ನಡೆ.
ಮಕರ: ಸಮಸ್ಯೆಗಳಿಗೆ ತಾತ್ಕಾಲಿಕ ವಿರಾಮ. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ಅಧ್ಯಯನಾಸಕ್ತಿ ಸುಧಾರಣೆ. ಸಂಸಾರದಲ್ಲಿ ಎಲ್ಲರಿಗೂ ನೆಮ್ಮದಿಯ ಅನುಭವ.
ಕುಂಭ: ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ.
ಮೀನ: ಸ್ಥಗಿತಗೊಂಡಿದ್ದ ಕಾರ್ಯಗಳಿಗೆ ಚಾಲನೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಇಲಾಖೆಗಳಿಂದ ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಮಾತೃವರ್ಗದ ಸದಾಶಯದಿಂದ ಕಾರ್ಯಗಳಲ್ಲಿ ಜಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ
MUST WATCH
ಹೊಸ ಸೇರ್ಪಡೆ
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.