ಫೆಬ್ರವರಿ 27: ಗುರುವಾರದ ನಿಮ್ಮ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ
Team Udayavani, Feb 27, 2020, 5:05 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.
ಮೇಷ
ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.
ವೃಷಭ
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.
ಮಿಥುನ
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.
ಕರ್ಕಾಟಕ
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.
ಸಿಂಹ
ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.
ಕನ್ಯಾ
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.
ತುಲಾ
ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.
ವೃಶ್ಚಿಕ
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.
ಧನು
ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.
ಮಕರ
ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.
ಕುಂಭ
ನೂತನ ಮಿತ್ರರು ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.
ಮೀನ
ಮನುಜನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.