Daily Horoscope; ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ
Team Udayavani, Jul 17, 2024, 7:20 AM IST
ಮೇಷ: ವರಿಷ್ಠರ ಗಮನ ಸೆಳೆಯಲು ಮೇಲಾಟ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯ ದೊಂದಿಗೆ ಸೆಣಸಾಟ. ಮಳೆಯಿಂದ ಕೃಷಿಕರಿಗೆ ಸಮಾಧಾನ. ಆಪ್ತರಿಂದ ನಿರೀಕ್ಷಿತ ಸಹಾಯ
ಸಕಾಲದಲ್ಲಿ ಕೈಸೇರಲಿದೆ.
ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೌಕರಿಯಲ್ಲಿರುವ ಬಂಧುಗಳಿಂದ ಕರೆ. ಮುದ್ರಣ ಕ್ಷೇತ್ರದವರಿಗೆ ಕೆಲಸದ ಒತ್ತಡ. ಗೃಹಿಣಿಯರ ಸ್ವಾವಲಂಬನೆ ಉದ್ಯಮದಲ್ಲಿ ಪ್ರಗತಿ.
ಮಿಥುನ: ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಪತ್ರಕರ್ತರಿಗೆ ರಾಜಕಾರಣಿ ಗಳ
ಒತ್ತಡ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ. ಹವಾಮಾನ ವೈಪರೀತ್ಯದಿಂದ ಆರೋಗ್ಯದ ಮೇಲೆ ಪರಿಣಾಮ.
ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾವರಣ.
ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ.
ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸಂಸಾರ ಸುಖ ಉತ್ತಮ. ಉದ್ಯೋಗಾಸಕ್ತರಿಗೆ ಶುಭ ಸೂಚನೆ.
ಕನ್ಯಾ: ಪ್ರತಿಕೂಲ ವಾತಾವರಣದಿಂದ ಕಾರ್ಯವಿಳಂಬ. ಸಹೋದ್ಯೋಗಿಯ ಸಹಾಯದಿಂದ
ಕಾರ್ಯ ಶೀಘ್ರ ಮುಕ್ತಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ.
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ.
ತುಲಾ: ಖಾಸಗಿ ರಂಗದ ನೌಕರರಿಗೆ ಹೊಸ ಅವಕಾಶಗಳು. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿ
ವೃದ್ಧಿಯಲ್ಲಿ ಆಸಕ್ತಿ. ಅಪರೂಪದ ಗೆಳೆಯರ ಭೇಟಿ.
ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನು
ಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮರದ ಸಾಮಗ್ರಿಗಳ ನಿರ್ಮಾ ಪಕರಿಗೆ ಉತ್ತಮ ಬೇಡಿಕೆ.
ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ
ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಕೈ ಕಸಬುದಾರರಿಗೆ ಕೈತುಂಬಾ
ಕೆಲಸ. ಮನೆಯಲ್ಲಿ ಅನುಕೂಲದ ವಾತಾವರಣ.
ಮಕರ: ಸಹೋದ್ಯೋಗಿಗಳಿಂದ ಹಿತಕರ ವರ್ತನೆ. ಗೃಹೋಪಯೋಗಿ ಸಾಮಗ್ರಿಗಳ
ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್ ಡಿಸೈನಿಂಗ್ ಪರಿಣತರಿಗೆ ಉದ್ಯೋಗಾವಕಾಶ.
ಕುಂಭ: ಹೊಸ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಆಸಕ್ತಿ. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಸ್ಥರಿಗೆ
ಹೊಸ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ಶುಭ ಸಮಾಚಾರ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ ಮಧ್ಯಮ.
ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಉತ್ತಮ ಸ್ಪಂದನ.ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಎಲ್ಲರ ಸಹಕಾರ. ಮಕ್ಕಳ
ಅಧ್ಯಯನಾಸಕ್ತಿ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.