ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Sep 2, 2022, 7:04 AM IST
ಮೇಷ:
ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಅಭಿವೃದ್ಧಿ.
ವೃಷಭ:
ನಾನಾರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮೂಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ವೃದ್ಧಿ. ದೇವತಾ ಸ್ಥಳ ಸಂದರ್ಶನ.
ಮಿಥುನ:
ಆರೋಗ್ಯದಲ್ಲಿ ಸುದಾರಣೆ- ಮನೆಯ ಕಡೆ ವಿಶೇಷ ಗಮನ ಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ಆತುರತೆ ಮೂಡದೇ ತಾಳ್ಮೆ ಸಹನೆಯಿಂದ ವರ್ತಿಸಿ.
ಕಟಕ:
ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮನಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ ತೋರಿದರೂ ಸ್ಥಾನ ಸುಖ.
ಸಿಂಹ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಉತ್ತಮ ವಾಕ್ ಚತುರತೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.
ಕನ್ಯಾ:
ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಗಳಲ್ಲಿ ಜಾಗ್ರತೆಯ ನಡೆ. ಸಾಂಸಾರಿಕ ಸುಖ ತೃಪ್ತಿದಾಯಕ. ಮಕ್ಕಳಿಂದ ವಿಶೇಷ ಸುಖ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.
ತುಲಾ:
ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಶ್ಚಿಕ:
ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ. ಮನೆಯಲ್ಲಿ ಸಂಭ್ರಮದ ಸಂತಸದ ಪರಿಸ್ಥಿತಿ.
ಧನು:
ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಸಹಕಾರ ಹಾಗೂ ಮಾರ್ಗದರ್ಶನ.
ಮಕರ:
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.
ಕುಂಭ:
ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫಲ.
ಮೀನ:
ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ . ಗೃಹದಲ್ಲಿ ಸಂತಸದ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.