ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Dec 10, 2021, 7:35 AM IST
ಮೇಷ: ಉದ್ಯೋಗ ವ್ಯವಹಾರಗಳಲ್ಲಿ ಮೋಸ, ವಂಚನೆ, ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫಲ ಒದಗೀತು. ಗೃಹದಲ್ಲಿ ವಿಶ್ರಾಂತಿ ಪಡೆಯುವುದರಿಂದ ನೆಮ್ಮದಿ.
ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಶ್ರೇಯಸ್ಸು, ಕೀರ್ತಿ ಲಭ್ಯ.
ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ.
ಕರ್ಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರಿಂದ ಸಹಕಾರ ಲಭಿಸೀತು.
ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಮನಸ್ಸಿನಲ್ಲಿ ಯೋಚಿಸಿದಂತೆ ಸರಿಯಾಗಿ ಜವಾಬ್ದಾರಿ ವಹಿಸದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ, ವಾಹನ ಸಂಬಂಧ ಖರ್ಚು ಸಂಭವ.
ಕನ್ಯಾ: ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆ ಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ.
ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆ ಸರಿಯಾದ ಧನ ಸಂಪಾದನೆ. ವಿದ್ಯಾರ್ಥಿಗಳಿಗೆ ಹಚ್ಚಿನ ಅವಕಾಶ ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನ ವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.
ಕುಂಭ: ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ.
ಮೀನ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿಬಂದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…
Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.