ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Dec 3, 2021, 8:02 AM IST
ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭಫಲ. ದೀರ್ಘ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.
ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.
ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆ ಗಳಿಗೆ ಅನುಕೂಲ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.
ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ವಾಕ್ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.
ಸಿಂಹ: ಕಾರ್ಯ ನಿಮಿತ್ತ ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮ ವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ ಧಾರ್ಮಿಕ ಕಾರ್ಯಗಳಿಗೆ, ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ.
ಕನ್ಯಾ: ಮಿತ್ರರಲ್ಲಿ , ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ.
ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿ ದಂತೆ ಕಾರ್ಯ ಸಫಲತೆಯಿಂದ ಮನಃ ಸಂತೋಷ.
ವೃಶ್ಚಿಕ: ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.
ಧನು: ಸಂಸಾರದೊಂದಿಗೆ ದೀರ್ಘ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು, ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ.
ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳು ವಿಪುಲ ಅವಕಾಶ.
ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ.
ಮೀನ: ಆರೋಗ್ಯ ಗಮನಿಸಿ. ಧನಾರ್ಜನೆಗೆ ಕೊರತೆ ಯಾಗದು. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಮನೆಯಲ್ಲಿ ಸಂತಸದ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.