ಶುಕ್ರವಾರದ ನಿಮ್ಮ ರಾಶಿಫಲದಲ್ಲಿ ಏನಿದೆ : ನೋಡಿ ನಿಮ್ಮ ಗ್ರಹಬಲ
Team Udayavani, Aug 13, 2021, 7:45 AM IST
xಮೇಷ: ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರ ದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಉತ್ತಮ ಸ್ಥಾನಮಾನ ಸುಖ.
ವೃಷಭ: ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ . ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.
ಮಿಥುನ: ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕ ವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಮತ್ತೂಬ್ಬರ ವ್ಯವಹಾರದಲ್ಲಿ ದಾಕ್ಷಿಣ್ಯಕ್ಕೆ ಸಿಕ್ಕಿ ತೊಂದರೆಗೊಳಗಾಗದಿರಿ.
ಕರ್ಕ: ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ.
ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದವ ರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ. ದಾಂಪತ್ಯ ಸಮಾಧಾನಕರ.
ಕನ್ಯಾ: ಆರೋಗ್ಯ ವೃದ್ಧಿ . ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ನಿರೀಕ್ಷಿತ ಸ್ಥಾನ ಪ್ರಾಪ್ತಿ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ . ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆ ಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಗೌರವ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.
ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸಕಾರ್ಯಗಳು ಜನಮನ್ನಣೆ. ಉತ್ತಮ ವಾಕ್ ಚತುರತೆಯಿಂದ ಹೆಚ್ಚಿನ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀìರ್ಘ ಪ್ರಯಾಣ ಯೋಗ.
ಕುಂಭ: ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ತೃಪ್ತಿದಾಯಕ.
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನಸುಖ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.