ಈ ರಾಶಿಯವರು ಇಂದು ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರುವುದು ಒಳ್ಳೆಯದಲ್ಲ
Team Udayavani, Nov 13, 2021, 7:30 AM IST
ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿ ದಂತೆ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ . ಮಕ್ಕಳ ಅಭಿವೃದ್ಧಿ ಗಾಗಿ ಧನವ್ಯಯ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.
ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ.
ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಹೋದ್ಯೋಗಿ ಗಳಿಂದ ಸಹೋದರ ಸಮಾನರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.
ಕಟಕ: ಆರೋಗ್ಯ ಗಮನಿಸಿ ನಿರ್ಲಕ್ಷ್ಯಮಾಡದಿರಿ. ತಾಳ್ಮೆ ಯಿಂದ ಕೆಲಸ ಕಾರ್ಯ ನಿರ್ವಹಿಸಿ ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.
ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ ಗೃಹದಲ್ಲಿ ಸಂತಸದ ವಾತಾವರಣ.
ತುಲಾ: ಆರೋಗ್ಯ ವೃದ್ಧಿ. ಅತೀ ಆಸೆ ಮಾಡದೆ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾಧಾನ. ವಿದ್ಯಾರ್ಥಿಗಳಿಗೆ ಶುಭ ಫಲದ ದಿನ.
ವೃಶ್ಚಿಕ: ರಾಜಕೀಯ ನಾಯಕರಿಗೆ ಉತ್ತಮ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಗೃಹಸ್ಥರಿಗೆ, ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿಗಳ ಸುಖ.
ಧನು: ಪಾಲುದಾರಿಕಾ ವ್ಯವಹಾರಸ್ಥರೂ, ದಂಪತಿಗಳೂ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನಕ್ಕೆ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಸುಧೃಢ.
ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರ ರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ಜಲೋತ್ಪನ್ನ ವಸ್ತುಗಳಿಂದ, ಆಹಾರೋದ್ಯಮ, ಆಭರಣ ವ್ಯವಹಾರಸ್ಥರಿಗೆ ನಿರೀಕ್ಷಿತ ಲಾಭ.
ಕುಂಭ: ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದಯಶಸ್ಸು. ಗಣಿ, ಭೂ ವ್ಯವಹಾರ, ಆಹಾರೋ ದ್ಯಮದವರಿಗೆ ಅನುಕೂಲ ಪರಿಸ್ಥಿತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.