Daily Horoscope: ವಿನಾಕಾರಣ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ,ಪರಿಶ್ರಮಕ್ಕೆ ತಕ್ಕ ಪ್ರತಿಫಲ
Team Udayavani, Mar 14, 2024, 7:26 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲದ ಭರವಸೆ. ಉದ್ಯಮದಲ್ಲಿ ಪೈಪೋಟಿ ಎದುರಿಸಲು ಸಜ್ಜಾಗಿರಿ. ಆಪ್ತರಿಂದ ಅಯಾಚಿತ ನೆರವು ಲಭ್ಯ. ಮನೆಗೆ ಅತಿಥಿಗಳ ಆಗಮನ. ಮಕ್ಕಳ ಓದಿನಲ್ಲಿ ಪ್ರಗತಿ.
ವೃಷಭ: ಉದ್ಯೋಗದಲ್ಲಿ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಬಿಡುವು ಇರಲಾರದು. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ದೂರದಲ್ಲಿರುವ ನೆಂಟರ ಆಗಮನ. ಸಾಹಿತ್ಯ ಅಧ್ಯಯನದಲ್ಲಿ ಆಸಕ್ತಿ. ದೇವತಾ ಸಾನ್ನಿಧ್ಯಕ್ಕೆ ಭೇಟಿ.
ಮಿಥುನ: ವಿನಾಕಾರಣ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರಿಂದ ಪ್ರೋತ್ಸಾಹದ ನುಡಿಗಳು. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ.
ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಪರಿಶ್ರಮಕ್ಕೆ ಮನ್ನಣೆ. ಉದ್ಯಮದ ಉತ್ಪಾದನೆ ಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ ಸಫಲ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾ ದೇವಿ ವ್ಯವಹಾರದಲ್ಲಿ ನಷ್ಟ.
ಸಿಂಹ: ಉದ್ಯೋಗಸ್ಥರಿಗೆ ಪದೋನ್ನತಿ. ಹೊಸ ಪರಿಚಯಸ್ಥರ ಸಹಾಯದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿಗೆ ಸಿದ್ಧತೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಕುಟುಂಬದಲ್ಲಿ ಸಂತಾನ ವೃದ್ಧಿ.
ಕನ್ಯಾ: ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಬಂಧುಗಳ ಮನೆಯಲ್ಲಿ ಶುಭಕಾರ್ಯಕ್ಕೆ ಸಿದ್ಧತೆ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫಲ.
ತುಲಾ: ಪರಿಹಾರವಿಲ್ಲದ ಸಮಸ್ಯೆ ಇರಲಾರದು. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್ ಧನಾಗಮ. ಉದ್ಯಮ ವಿಸ್ತರಣೆಗೆ ವಿತ್ತ ಸಂಸ್ಥೆಯಿಂದ ನೆರವು. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ.
ವೃಶ್ಚಿಕ: ಇದುವರೆಗೆ ಕಾಡುತ್ತಿದ್ದ ಸಂಕಟಗಳಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ಮತ್ತು ಹಿರಿತನಕ್ಕೆ ಗೌರವ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ನೆಂಟರ ಆಗಮನದಿಂದ ಹಬ್ಬದ ವಾತಾವರಣ.
ಧನು: ಹಿತೈಷಿಗಳಿಂದ ಆವಶ್ಯಕತೆಗೆ ತಕ್ಕಂತೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.
ಮಕರ: ಕುಟುಂಬದ ಹಿತಕಾಯುವ ಕ್ರಮದಲ್ಲಿ ಜಯ. ಉದ್ಯೋಗ ಸ್ಥಾನದಲ್ಲಿ ಗೌರವ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ಕುಂಭ: ಗಳಿಕೆಯ ಗಣ ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಪೂರ್ವನಿಯೋಜಿತ ಭೇಟಿ. ವ್ಯವಹಾರದ ಕ್ಷೇತ್ರ ವಿಸ್ತರಣೆ. ಧಾರ್ಮಿಕ ಕ್ಷೇತ್ರದ ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ.
ಮೀನ: ಹಲವು ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ತಾಯಿಯ ಕಡೆಯ ಹಿರಿಯ ಬಂಧುವಿಗೆ ಸಹಾಯ. ಅನ್ಯಸಮಾಜದ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವ್ಯವಹಾರ ಸಂಬಂಧ ರಾಜಕಾರಣಿಯ ಭೇಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.