Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
Team Udayavani, Mar 29, 2024, 7:29 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಹೆಚ್ಚು ವ್ಯತ್ಯಾಸ ಇರದು. ಹೊಟೇಲ್ ಉದ್ಯಮಿಗಳಿಗೆ ಹೊಸ ಸಮಸ್ಯೆಗಳು. ದೂರ ದೇಶದಲ್ಲಿರುವ ಬಂಧುಗಳೊಡನೆ ದೂರವಾಣಿಯಲ್ಲಿ ಸಂಭಾಷಣೆ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.
ವೃಷಭ: ಉದ್ಯೋಗಸ್ಥರಿಗೆ ಹೊಸ ಅವಕಾಶಗಳು ತೆರೆದುಕೊಳ್ಳುವ ದಿನ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ಮಿಥುನ: ಯೋಜನೆಗಳನ್ನು ತ್ವರಿತಗೊಳಿಸುವ ಪ್ರಕ್ರಿಯೆ ಆರಂಭ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡುವುದರಿಂದ ಅವಮಾನ. ಯುವಜನರಿಗೆ ಧಾರ್ಮಿಕ ಮಾರ್ಗ ದರ್ಶನದ ವ್ಯವಸ್ಥೆಯ ನೇತೃತ್ವ.
ಕರ್ಕಾಟಕ: ಉದ್ಯೋಗಸ್ಥರಿಗೆ ತಡವಾಗಿ ವೇತನ ಏರಿಕೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಆಸ್ಪತ್ರೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ. ಚಾರಿತ್ರÂವಂತ ಉನ್ನತರ ಹೆಸರು ಕೆಡಿಸುವ ಹುನ್ನಾರ.
ಸಿಂಹ: ಒಂದಕ್ಕಿಂತ ಹೆಚ್ಚು ವ್ಯವಹಾರಗಳಲ್ಲಿ ಗಮನವನ್ನು ಕೇಂದ್ರೀಕರಿಸುವ ಅನಿವಾರ್ಯತೆ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮಕ್ಕೆ ಹೊಸ ರೂಪ ನೀಡುವ ಪ್ರಕ್ರಿಯೆ ಆರಂಭ. ಕುಟುಂಬದ ಮನೆಯಲ್ಲಿ ದೇವತಾರ್ಚನೆ.
ಕನ್ಯಾ: ಹೊಸ ಕಾರ್ಯಕ್ಷೇತ್ರದಲ್ಲಿ ಅನುಕೂಲದ ವಾತಾವರಣ. ಕಾರ್ಯನಿಷ್ಠೆಗೆ ಮಾಲಕರಿಂದ ಶ್ಲಾಘನೆ. ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಶಾಶ್ವತ ನೀರಾವರಿ ಒದಗಿಸುವ ಪ್ರಯತ್ನದಲ್ಲಿ ಮುನ್ನಡೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.
ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳಿಂದ ಮಾಮೂಲು ಪೈಪೋಟಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವ ಹಾರದಿಂದ ದೂರವಿರಿ.
ವೃಶ್ಚಿಕ: ಸದ್ಯದ ಪರಿಸ್ಥಿತಿ ಎಲ್ಲ ರೀತಿಯಲ್ಲೂ ಉತ್ತಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಚ್ಯುತಿ ಯಾಗದು. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಆತಂಕ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ.
ಧನು: ಉದ್ಯೋಗಸ್ಥರಿಗೆ ಘಟಕದ ಕಾರ್ಯ ನಿರ್ವಹಣೆಯನ್ನು ಸುಧಾರಿಸುವ ಜವಾಬ್ದಾರಿ. ಉದ್ಯಮದ ವೈವಿಧಿÂàಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.
ಮಕರ: ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಬಂಧು ವರ್ಗದಲ್ಲಿ ವೈಷಮ್ಯ. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ.
ಕುಂಭ: ನಿಲ್ಲದೆ ಸಾಗುವ ಹಲವು ಬಗೆಯ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ನಿಶ್ಚಿಂ ತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಲ್ಲಿ ಲಾಭ.
ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ. ಕೊಂಚ ಕಾಲದಿಂದ ನಿಲ್ಲಿಸಿದ್ದ ಉದ್ಯಮ ಮತ್ತೆ ಪ್ರಾರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣೆಗೆ ಸಂಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಆಸಕ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.