Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


Team Udayavani, May 4, 2024, 7:15 AM IST

24-saturday

ಮೇಷ: ಕಳೆದ ದಿನಗಳತ್ತ ಹಿನ್ನೋಟ ಬೀರಿ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕೆಲಸಗಳು ಮುಕ್ತಾಯ. ಉದ್ಯಮದ ನೌಕರರಿಗೆ ಆನಂದದ ಮನೋಭಾವ. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ಉದ್ಯೋಗದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದಲ್ಲಿ ಕೈಗೊಂಡ ಪ್ರಯೋಗಗಳ ಮುಂದುವರಿಕೆ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫ‌ಲ. ಸತ್ಯ ಹೇಳಿ ನಿಷ್ಠುರಕ್ಕೆ ಗುರಿಯಾಗುವಿರಿ.

ಮಿಥುನ: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ. ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಉದ್ಯಮ ಅಭಿವೃದ್ಧಿಗೆ ವಿತ್ತಸಂಸ್ಥೆ ನೆರವು ಪ್ರಾಪ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕರ್ಕಾಟಕ: ಉದ್ಯೋಗದಲ್ಲಿ ದಿನೇದಿನೇ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಕೃಷ್ಯುತ್ಪನ್ನ ಮಾರಾಟದಿಂದ ಸಾಮಾನ್ಯ ಲಾಭ. ಕುಟುಂಬದ ಹಿರಿ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಸಮೃದ್ಧವಾದ ಕಾರ್ಯಶಕ್ತಿಯೊಂದಿಗೆ ರಂಗಪ್ರವೇಶ. ಉದ್ಯೋಗ ಕ್ಷೇತ್ರದಲ್ಲಿ ಅಗ್ರಪಂಕ್ತಿಯ ಸ್ಥಾನಮಾನ. ಎÇÉೆಯಿಲ್ಲದ ಉದ್ಯಮದ ಪ್ರಗತಿ. ಮನೆಗೆ ಬಂಧುಗಳ ಆಗಮನದಿಂದ ಸಂತಸ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.

ಕನ್ಯಾ: ಪರಿಣತಿ ಹೊಂದಿರುವ ವೃತ್ತಿಯಲ್ಲಿ ಸ್ಥಿರವಾಗುವ ಪ್ರಯತ್ನ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ವಿವಾಹಾಪೇಕ್ಷಿಗಳಿಗೆ ಯೋಗ್ಯ ಜೋಡಿ ಸಿಗುವ ಭರವಸೆ.

ತುಲಾ: ಅಳುಕು ಬಿಟ್ಟು ವ್ಯವಹರಿಸಿ. ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಹಿತಶತ್ರುಗಳ ಸಂಚಿಗೆ ಸೋಲು. ಗುರುಸ್ಥಾನ ದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ. ಸಣ್ಣ ಪ್ರಯಾಣ ಸಂಭವ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ರಾಜಕಾರಣಿಗಳ ಹೆಸರು ಕೆಡಿಸುವ ಪ್ರಯತ್ನ ವಿಫ‌ಲ. ಸಂಸಾರದಲ್ಲಿ ಹುಳಿ ಹಿಂಡುವ ಪ್ರಯತ್ನ ವಿಫ‌ಲ.

ಧನು: ಸಂಪಾದನೆಯ ಮಾರ್ಗದ ಕುರಿತು ತೃಪ್ತಿ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಜೇನು ಸಾಕಣೆಯಲ್ಲಿ ಪ್ರಗತಿ. ಮಹಿಳೆಯರ ಉಸ್ತುವಾರಿಯ ಖಾದ್ಯಪದಾರ್ಥಗಳ ಘಟಕಕ್ಕೆ ಅಭೂತಪೂರ್ವ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಕ್ತಾಯ. ಉದ್ಯೋಗ ಹುಡುಕುತ್ತಿರುವವರಿಗೆ ಅವಕಾಶಗಳು ಗೋಚರ. ಉದ್ಯಮ ಉತ್ಪನ್ನಗಳ ಗುಣಮಟ್ಟ ಸುಧಾರಣೆಯಿಂದಾಗಿ ಮಾರಾಟ ವೃದ್ಧಿ.

ಕುಂಭ: ಕುಗ್ಗದ ಹುರುಪಿನೊಂದಿಗೆ ಕಾರ್ಯರಂಗಕ್ಕೆ ಪ್ರವೇಶ. ಉದ್ಯಮದ ಉತ್ಪನ್ನ ಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಟೈಲರಿಂಗ್‌ ವೃತ್ತಿ ಬಲ್ಲವರಿಗೆ ಉದ್ಯೋಗಾವಕಾಶ. ಸ್ಟೇಶನರಿ ವಿತರಕರ ಮಾರುಕಟ್ಟೆ ವಿಸ್ತರಣೆ.

ಮೀನ: ಸಪ್ತಾಹ ಮುಗಿಯುತ್ತಾ ಬಂದಂತೆ ಇನ್ನಷ್ಟು ಕಾರ್ಯ ಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳ ಕಡೆಗೆ ಗಮನ ಹರಿಸಬೇಕಾದ ಸಂದರ್ಭ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು. ಉದ್ಯೋಗ ಅರಸುತ್ತಿರುವವರಿಗೆ ಮಾರ್ಗದರ್ಶನ.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.