Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Team Udayavani, Nov 15, 2024, 7:18 AM IST
ಮೇಷ: ಪ್ರತಿದಿನ ಹೊಸದೊಂದು ಹೊಣೆಗಾರಿಕೆ ಬರುವ ಸಾಧ್ಯತೆ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ನೊಂದವರಿಗೆ ಸಹಾಯ ಮಾಡುವ ಅವಕಾಶ.
ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ ಹೆಚ್ಚಳ. ಪ್ರಮುಖ ವ್ಯಕ್ತಿಯೊಡನೆ ವ್ಯವಹಾರ ಮಾತುಕತೆ.
ಮಿಥುನ: ಪರೋಪಕಾರದಿಂದ ಸಂತೃಪ್ತಿ, ಸಮಾಧಾನ. ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಪಿತ್ರಾರ್ಜಿತ ಭೂಮಿಯಲ್ಲಿ ನೆಲೆಸುವ ನಿರ್ಧಾರ. ಎಲ್ಲರಿಗೂ ಉತ್ತಮ ಆರೋಗ್ಯ.
ಕರ್ಕಾಟಕ: ನ್ಯಾಯಾಲಯದ ವ್ಯವಹಾರದಲ್ಲಿ ಜಯ. ಉದ್ಯಮಗಳಿಗೆ ನೌಕರರ ಸಮಸ್ಯೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿ ಆಧಾರಿತ ಉದ್ಯಮಕ್ಕೆ ಯಶಸ್ಸು.
ಸಿಂಹ: ಉನ್ನತ ಸಾಧನೆಗಾಗಿ ಸಹೋದ್ಯೋಗಿ ಗಳಿಂದ ಸಮ್ಮಾನ. ವಸ್ತ್ರೋದ್ಯಮ, ಸ್ವರ್ಣೋ ದ್ಯಮಕ್ಕೆ ಲಾಭ. ಸಾಮಾಜಿಕ ಪಿಡುಗುಗಳ ನಿವಾರಣೆಗೆ ಚಿಂತನೆ.ಅಪರಿಚಿತ ಕ್ಷೇತ್ರದಿಂದ ಪಾಲುದಾರಿಕೆ ಪ್ರಸ್ತಾವ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ.
ಕನ್ಯಾ: ಉದ್ಯೋಗ ಸ್ಥಾನದಲ್ಲಿ ಆಹ್ಲಾದದ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಲ್ಲಿ ನಷ್ಟ. ಪಾಲುದಾರಿಕೆ ಉದ್ಯಮದಲ್ಲಿ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.
ತುಲಾ: ಉದ್ಯೋಗದಲ್ಲಿ ಸಂತೃಪ್ತಿಯ ವಾತಾವರಣ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳ ಏಳಿಗೆ. ಸಾಮಾಜಿಕ ಸಮಾರಂಭದಲ್ಲಿ ಭಾಗಿ.
ವೃಶ್ಚಿಕ: ಉದ್ಯೋಗಿಗಳಿಗೆ ಹೆಚ್ಚು ದುಡಿಯಲು ಉತ್ತೇಜನ. ಸರಕಾರಿ ಅಧಿಕಾರಿಗಳಿಗೆ ಆತಂಕದ ಭಾವ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.
ಧನು: ಸಹೋದ್ಯೋಗಿಗಳಿಂದ ಪ್ರೀತಿ,ಗೌರವದ ವರ್ತನೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಆಪ್ತಮಿತ್ರನ ಸಲಹೆಯಿಂದ ಲಾಭ.
ಮಕರ: ಸಮಯಮಿತಿಯ ಕಾರ್ಯಗಳು ಮುಕ್ತಾಯ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ವ್ಯಾಪಾರಿಗಳಿಗೆ ಹೇರಳ ಲಾಭ. ಕನ್ಯಾರ್ಥಿಗಳಿಗೆ ಶುಭಸೂಚನೆ. ಬಂಧುಗಳೊಂದಿಗೆ ಸಂಬಂಧ ಸುಧಾರಣೆ. ಮಕ್ಕಳ ಕ್ಷೇಮ ಚಿಂತನೆ.
ಕುಂಭ: ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ.
ಮೀನ: ಉದ್ಯೋಗ ಸ್ಥಾನದಲ್ಲಿ ಹೊಸ ವಾತಾವರಣ. ಅಪೇಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಸರಕಾರಿ ಇಲಾಖೆಗಳಿಂದ ಸಹಾಯ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.