Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Team Udayavani, Sep 20, 2024, 7:19 AM IST
ಮೇಷ: ಬಹುಮಟ್ಟಿಗೆ ಸಂತೋಷದ ದಿನ. ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ಆಪ್ತರಿಂದ ಅನುಕೂಲ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಸ್ವಲ್ಪಮಟ್ಟಿನ ತಿರುಗಾಟ. ಗೃಹಿಣಿ ಯರಿಗೆ ನೆಮ್ಮದಿ.
ವೃಷಭ: ವ್ಯವಹಾರ ಕ್ಷೇತ್ರ ವಿಸ್ತರಣೆ. ವಧೂ – ವರಾನ್ವೇಷಿಗಳಿಗೆ ಶುಭವಾರ್ತೆ. ಗೃಹಿಣಿಯರ ಸ್ವಾವಲಂಬನೆ ಆದಾಯ ವೃದ್ಧಿ. ಲೆಕ್ಕ ಪರಿಶೋಧಕರು, ನ್ಯಾಯವಾದಿಗಳೇ ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ. ಒಟ್ಟಿನಲ್ಲಿ ಶುಭಫಲಗಳ ದಿನ.
ಮಿಥುನ: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ. ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ. ಸ್ವತಂತ್ರ ವ್ಯವಹಾರ ಸದ್ಯಕ್ಕೆ ಬೇಡ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗಂಥ ಅಧ್ಯಯನದಲ್ಲಿ ಆಸಕ್ತಿ.
ಕರ್ಕಾಟಕ: ಮಿಶ್ರಫಲಗಳ ದಿನ. ಸರಕಾರಿ ನೌಕರರಿಗೆ ವಿರಾಮ ದೂರ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ನ್ಯಾಯಾಲಯ ವ್ಯವಹಾರದಲ್ಲಿ ವಿಳಂಬ.
ಸಿಂಹ: ಎಲ್ಲ ಕಾರ್ಯಕ್ಷೇತ್ರಗಳಲ್ಲೂ ಶುಭ. ಹಳೆಯ ಸಾಲ ಮರಳಿ ಕೈಸೇರಿದ ಆನಂದ. ಅಧಿಕಾರಿಗಳ ಸಕಾಲಿಕ ಕ್ರಮದಿಂದ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ವ್ಯವಹಾರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.
ಕನ್ಯಾ: ಜನಪರ ಕಾರ್ಯಗಳಿಂದ ಗೌರವ ಪ್ರಾಪ್ತಿ. ಕಾರ್ಯಾರ್ಥವಾಗಿ ಬೇರೆಬೇರೆ ಸ್ಥಳ ಗಳಿಗೆ ಭೇಟಿ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲುಗೊಳ್ಳುವ ಆಸಕ್ತಿ.
ತುಲಾ: ಪರಿಸರ ಸ್ವಚ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆ ಯಲ್ಲಿ ಆಸಕ್ತರಿಗೆ ಸಂತೋಷದ ಸಂದರ್ಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಉಲ್ಲಾಸದ ದಿನ.
ವೃಶ್ಚಿಕ: ವಸ್ತ್ರಾಭರಣ ಖರೀದಿ ಸಂಭವ.ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿ. ಸತ್ಪಾತ್ರರಿಗೆ ದಾನ ಮಾಡುವ ಅವಕಾಶ. ಗೃಹಿಣಿ ಯರಿಗೆ ಹರ್ಷದ ವಾತಾವರಣ.
ಧನು: ಸರಕಾರಿ ಉದ್ಯೋಗಸ್ಥರಿಗೆ ಆತಂಕ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ ಯೋಗ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ.
ಮಕರ: ಆದಾಯ ವೃದ್ಧಿ ಪ್ರಯತ್ನವು ಫಲಿಸುವ ಕಾಲ ಸನ್ನಿಹಿತ. ಕಾರ್ಯರಂಗದಲ್ಲಿ ಸಹನೆಗೆ ಪ್ರಾಧಾನ್ಯ ಸಂಗೀತ ಶ್ರವಣ, ಸತ್ಸಂಗದಿಂದ ಮನಸ್ಸಿಗೆ ನೆಮ್ಮದಿ. ಶಸ್ತ್ರವೈದ್ಯರಿಗೆ ಕೀರ್ತಿ. ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.
ಕುಂಭ: ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿಯೊಂದರ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಮನೆಯಲ್ಲಿ ದೇವತಾ ಕಾರ್ಯ.
ಮೀನ: ಹಲವು ಬಗೆಯ ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವಿರಿ. ಕಾರ್ಯ ಯಶಸ್ವಿಯಾಗುವ ಭರವಸೆಯೇ ವಿಜಯದ ಸೂತ್ರ ಮನೆಯಲ್ಲಿಯಲ್ಲಿ ಒಳ್ಳೆಯ ಸಹಕಾರ, ಸೌಜನ್ಯದ ವಾತಾವರಣ. ಎಲ್ಲರ ಆರೋಗ್ಯ ಉತ್ತಮ. ಅಸಹಾಯಕರಿಗೆ ನೆರವಾಗುವ ಸಂದರ್ಭ. ದೇವತಾ ಪೂಜಾ ಕಾರ್ಯಕ್ಕಾಗಿ ಬಂಧುಗಳ ಮನೆಗೆ ಭೇಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.