![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 20, 2022, 7:13 AM IST
ಮೇಷ:
ಅಧ್ಯಯನ ನಿರತರಿಗೆ ಅನುಕೂಲಕರ ದಿನ. ಸರ್ವ ವಿಧದ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃತೃಪ್ತಿ.
ವೃಷಭ:
ಗಣ್ಯ ವ್ಯಕ್ತಿಗಳ ಸಂಪರ್ಕ. ಗೌರವ ಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯ ವೈಖರಿ. ಜನಮನ್ನಣೆ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣ ವಸ್ತು ಸಂಗ್ರಹ.
ಮಿಥುನ:
ಅತಿಯಾದ ಶ್ರಮ ಜವಾಬ್ದಾರಿ ಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಪಾಲುದಾರ ರಿಂದ ಉತ್ತಮ ಪ್ರೋತ್ಸಾಹ ಲಭಿಸೀತು. ವಿವೇಕದಿಂದ ಕೂಡಿದ ಕಾರ್ಯ ವೈಖರಿಯಿಂದ ಪ್ರಗತಿ.
ಕರ್ಕ:
ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ಧನಾರ್ಜನೆ. ಶುಭಮಂಗಳ ಕಾರ್ಯ ದಲ್ಲಿ ಪಾಲ್ಗೊಳ್ಳುವ ಸಂಭವ.
ಸಿಂಹ:
ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ.
ಕನ್ಯಾ:
ಮಾನಸಿಕ ನೆಮ್ಮದಿ. ಆರೋಗ್ಯ ವೃದ್ಧಿ. ಸಾಂಸಾರಿಕವಾಗಿ ಸಂತೋಷ. ಗೌರವಯುತ ವಾದ ಧನ ಸಂಪಾದನೆ. ಉತ್ತಮ ನಡತೆಯಿಂದ ಕೂಡಿದ ಕಾರ್ಯ ವೈಖರಿ.
ತುಲಾ:
ಬಂಧುಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ, ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಆಸ್ತಿ ವಿಚಾರದಲ್ಲಿ ತಲ್ಲೀನತೆ. ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ.
ವೃಶ್ಚಿಕ:
ಆರೋಗ್ಯ ಗಮನಿಸಿ.ಗುರುಹಿರಿಯ ರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಅತೀ ಉದಾರತನದಿಂದ ಕಿರಿಕಿರಿ ಆದೀತು. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ.
ಧನು:
ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರದಲ್ಲಿ ಸಜ್ಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖ ರಾಗಿ ನಿಷೂuರ ಆಗದಂತೆ ಎಚ್ಚರ ವಹಿಸಿ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿ.
ಕುಂಭ:
ಆರೋಗ್ಯ ಮಧ್ಯಮ. ಉತ್ತಮ ವರಮಾನ. ಉದ್ಯೋಗ ವ್ಯವಹಾರ ಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ನಾಯಕತ್ವ ಗುಣ ವೃದ್ಧಿ. ವಾಕ್‌ಚತುರತೆಯ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ.
ಮೀನ:
ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫಲತೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ನಿಷ್ಠೆಯಿಂದ ಅಧ್ಯಯನ ಮಾಡಿ ಗುರಿ ಸಾಧಿಸಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
You seem to have an Ad Blocker on.
To continue reading, please turn it off or whitelist Udayavani.