ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, May 17, 2022, 7:14 AM IST
ಮೇಷ:
ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.
ವೃಷಭ:
ಧೈರ್ಯ ಶೌರ್ಯ ಪರಾಕ್ರಮ ದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗ ದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.
ಮಿಥುನ:
ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.
ಕರ್ಕ:
ಸಾಂಸಾರಿಕ ಸುಖ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಸಿಂಹ:
ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಅಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.
ಕನ್ಯಾ:
ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.
ತುಲಾ:
ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫಲತೆಯಿಂದ ಮನಃಸಂತೋಷ.
ವೃಶ್ಚಿಕ:
ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.
ಧನು:
ಸಂಸಾರದೊಂದಿಗೆ ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.
ಮಕರ:
ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.
ಕುಂಭ:
ಆರೋಗ್ಯ ಉತ್ತಮ. ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದ ರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿಕರ.
ಮೀನ:
ಆರೋಗ್ಯ ಗಮನಿಸಿ. ಸಂಸಾರದಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಮನೆಯಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫಲಗಳು, ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ
Daily Horoscope: ಶುಭಫಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ
Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.